HomeUncategorizedಪ್ರಜ್ವಲ್ ರೇವಣ್ಣಗೆ ಪೆರೋಲ್ ನಿರಾಕರಿಸಿದ ಕಾರಾಗೃಹ ಇಲಾಖೆ

ಪ್ರಜ್ವಲ್ ರೇವಣ್ಣಗೆ ಪೆರೋಲ್ ನಿರಾಕರಿಸಿದ ಕಾರಾಗೃಹ ಇಲಾಖೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರೋ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಕಾರಾಗೃಹ ಇಲಾಖೆ ನಿರಾಕರಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವವರಿಗೆ ಕಾರಾಗೃಹ ಇಲಾಖೆ ಪೆರೋಲ್ ನೀಡಲು ಸಾಧ್ಯವಿಲ್ಲ ಮತ್ತು ಅಧಿಕಾರ ವ್ಯಾಪ್ತಿಯೂ ಇಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ.

ಪ್ರಜ್ವಲ್ ಅಜ್ಜಿ ಚೆನ್ನಮ್ಮ ನಿಧನ ಹಿನ್ನೆಲೆಯಲ್ಲಿ ಈಗಾಗಲೇ ಕುಟುಂಬಸ್ಥರು ತಿಥಿಯ ದಿನ ಪೂಜೆ ಸಲ್ಲಿಸೋದಕ್ಕೆ ಕರೆತರುವ ಪ್ರಯತ್ನ ಮಾಡಿದ್ದರು. ಕಾರಾಗೃಹ ಇಲಾಖೆ ಅಧಿಕಾರ ವ್ಯಾಪ್ತಿ ಇಲ್ಲ ಎಂದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

15 ದಿನಗಳ ಕಾಲ ಪೆರೋಲ್ ಸಿಕ್ಕಿದರೆ 30ನೇ ತಾರೀಖು ಪುಣ್ಯ ತಿಥಿ ಇದೆ. ಅವತ್ತಿನ ಬದಲಾಗಿ ಬೇರೊಂದು ದಿನ ಸಮಾಧಿಯ ಬಳಿ ಕರೆದುಕೊಂಡು ಹೋಗಿ ಪೂಜೆ ನೆರವೇರಿಸೋ ತಯಾರಿಯಲ್ಲಿದೆ ಕುಟುಂಬ ಎಂದು ತಿಳಿದುಬಂದಿದೆ.

ಇನ್ನು ಸಜಾ ಬಂಧಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಕುಟುಂಬಸ್ಥರು, ಸಂಬಂಧಿಕರು ಮತ್ತು ಸ್ನೇಹಿತರಿಗೆ ಭೇಟಿಯ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿಯ ವೇಳೆ ಕಾರಾಗೃಹದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಯಾವುದೇ ಕಾರಣದಿಂದ ಭೇಟಿಗೆ ಅವಕಾಶ ನಿರಾಕರಿಸಿದರೆ, ಅದರ ಬಗ್ಗೆ ಅಪರಾಧಿಗೆ ಸೂಕ್ತ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದೂ ಆದೇಶಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular