ಬೆಂಗಳೂರು: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು ಪಡಿಸಿದ ತನಿಖಾ ತಂಡದ 30 ಅಧಿಕಾರಿಗಳು, ಸಿಬ್ಬಂದಿಗಳಿಗೆ 25 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ.
ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ ಪಿ ಸುಮನ್ ಡಿ ಪನ್ನೇಕರ್, ಎಸ್ ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ ಪೆಕ್ಟರ್ ಗಳಾದ ರಾವ್ ಗಣೇಶ್ ಜನಾರ್ಧನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 25 ಲಕ್ಷ ನಗದು ಬಹುಮಾನವನ್ನು ಪೊಲೀಸ್ ಇಲಾಖೆಯಿಂದ ಘೋಷಣೆಯಾಗಿದೆ.
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ ಐಟಿಗೆ ಹಸ್ತಾಂತರಿಸಿತ್ತು. ತನಿಖೆಯಲ್ಲಿ ಪ್ರಜ್ವಲ್ ರೇವಣ್ಣ ಅಪರಾಧ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖಾ ತಂಡ ಖಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪೊಲೀಸ್ ಇಲಾಖೆ ಈ ಬಹುಮಾನ ಘೋಷಿಸಿದೆ.

