ಬೆಂಗಳೂರು: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನ ಸೆಲ್ ನಲ್ಲಿ ಮೊಬೈಲ್ ಫೋನ್ ಬಳಸುತ್ತಿದ ಬಗ್ಗೆ ತನಿಖೆಯಲ್ಲಿ ಬಯಲಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ ಪ್ರಜ್ವಲ್ ಬ್ಯಾರಕ್ ನಲ್ಲಿ ಮೊಬೈಲ್, ಸಿಮ್ ಕಾರ್ಡ್ ಮೊದಲಾದ ವಸ್ತುಗಳು ಪತ್ತೆಯಾಗಿದ್ದವು.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಬಳಸಲು ಸಾಥ್ ನೀಡಿದ್ದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಸಿಕ್ಕ ಮೊಬೈಲ್, ಸಿಮ್ ಕಾರ್ಡ್ ಗಳ ಮೂಲ ಪತ್ತೆ ಹಚ್ಚಿದಾಗ ಪೊಲೀಸರಿಗೆ ಡಿಜೆ ಹಳ್ಳಿಯ ಲಿಂಕ್ ಸಿಕ್ಕಿತ್ತು. ಇದೀಗ ಈ ಸಂಬಂಧ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿ ಏಳು ಜನರ ವಿರುದ್ಧ ಎಪು ಐ ಆರ್ ದಾಖಲಾಗಿದೆ.
ಪ್ರಜ್ವಲ್ ರೇವಣ್ಣಗೆ ಮೊಬೈಲ್ ಸಿಗಲು ಜೈಲ್ ವಾರ್ಡನ್ ಹಾಗೂ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಆರೋಪಿಗಳಾದ ಸಿದ್ದಿಕ್ ಹಾಗೂ ತೌಫಿಕ್ ಸಾಥ್ ನೀಡಿದ್ದರು. ಜೈಲಿನಲ್ಲಿ ಪರಿಚಯವಾಗಿದ್ದ ತೌಫಿಕ್ ಅನಾರೋಗ್ಯದಿಂದ ಜಯನಗರ ಆಸ್ಪತ್ರೆ ಸೇರಿದ್ದ ಆಗ ಮೊಬೈಲ್ ಖರೀದಿ ಮಾಡಿದ್ದ. ನಂತರ ಸಿದ್ದಿಕ್ ಹೆಸರಿನಲ್ಲಿ ಸಿಮ್ ಕಾರ್ಡ್ ಪಡೆದು ಜೈಲಿನಲ್ಲಿ ಯೂಸ್ ಮಾಡ್ತಿದ್ದರು. ಇವರ ಬಳಿ ಪ್ರಜ್ವಲ್ ಒಂದು ಲಕ್ಷ ರೂ.ಗೆ ಮೊಬೈಲ್, 50 ಸಾವಿರ ರೂ.ಗೆ ಸಿಮ್ ಕಾರ್ಡ್ ಖರೀದಿಸಿದ್ದಾರೆ ಎನ್ನಲಾಗಿದೆ.
ಈ ಸಿಮ್ ಆಂಧ್ರದ ಪುಂಗನೂರಿನಲ್ಲಿ ಖರೀದಿ ಮಾಡಿರೋದು ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಈಗಾಗಲೇ ಓರ್ವನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಮೊಬೈಲ್ ಕಾಲ್ ಡಿಟೇಲ್ಸ್ ಚೆಕ್ ಮಾಡಿದಾಗ ಹಲವು ಯುವತಿಯರಿಗೆ, ಕುಟುಂಬಸ್ಥರಿಗೆ ಕರೆ ಮಾಡಿರೋದು ಬೆಳಕಿಗೆ ಬಂದಿದೆ. ತನಿಖೆ ವೇಳೆ ಪೊಲೀಸರು ಪ್ರಜ್ವಲ್ ಕರೆ ಮಾಡಿ, ಮಾತನಾಡಿದವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಕರೆಯೋ ಸಾಧ್ಯತೆಯಿದೆ.
ನಿದ್ದೆಯಲ್ಲಿದ್ದ ಪತ್ನಿ, ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ವ್ಯಕ್ತಿ
ಜೈಪುರ: ವ್ಯಕ್ತಿಯೊಬ್ಬ ನಿದ್ದೆಯಲ್ಲಿದ್ದ ತನ್ನ ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಮನೆಯಿಂದ ಪರಾರಿಯಾಗಿರುವ ಘೋರ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಕರ್ಧಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಝಾ ಎಂಬ ವ್ಯಕ್ತಿ ಗಾಢ ನಿದ್ದೆಯಲ್ಲಿದ್ದ ತನ್ನ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳ ತಲೆಗೆ ಇಟ್ಟಿಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕೃತ್ಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಸಾಮೂಹಿಕ ಹತ್ಯಾ ಕಾಂಡಕ್ಕೆ ಇಡೀ ರಾಜಸ್ಥಾನವೇ ಬೆಚ್ಚಿ ಬಿದ್ದಿದೆ. ಗೀತಾ ಝಾ (40) ಹಾಗೂ ಆಕೆಯ ಪುತ್ರಿಯರಾದ ನಂದಿನಿ, ಗಿರಿಜಾ ಮತ್ತು ರಾಧಿಕಾ (17 ರಿಂದ 23 ವರ್ಷ ವಯಸ್ಸಿನವರು) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯರಾತ್ರಿ ಅಥವಾ ಇಂದು ನಸುಕಿನ ಜಾವ ಕುಟುಂಬದ ಸದಸ್ಯರು ಗಾಢ ನಿದ್ದೆಯಲ್ಲಿದ್ದ ಸಮಯದಲ್ಲಿ ರಾಹುಲ್ ಝಾ, ಇಟ್ಟಿಗೆ ಹಾಗೂ ಭಾರವಾದ ಸಿಮೆಂಟ್ ಕಲ್ಲಿನಿಂದ ಪತ್ನಿ ಹಾಗೂ ಮಕ್ಕಳ ತಲೆಗೆ ಹೊಡೆದು ಕೊಂದಿದ್ದಾನೆ.
ಬರ್ಬರ ಹತ್ಯೆ ಬಳಿಕವೂ ಮನೆಯೊಳಗೆ ಇದ್ದ ಆರೋಪಿ ಝಾ, ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಬಾಗಿಲಿಗೆ ಬಂದ ಹಾಲಿನವನಿಂದ ಹಾಲು ಪಡೆದುಕೊಂಡಿದ್ದಾನೆ, ನಂತರ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ಬಟ್ಟೆಯಿಂದ ಒರೆಸಿ ಮುಚ್ಚಿಡಲು ಯತ್ನಿಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಬೆಳಗ್ಗೆ 10 ಗಂಟೆಯಾದರೂ ಮನೆಯ ಬಾಗಿಲು ತೆರೆಯದಿದ್ದಾಗ ಅಕ್ಕಪಕ್ಕದವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬಾಗಿಲು ಮುರಿದು ಒಳನುಗ್ಗಿದಾಗ ಪತ್ನಿ, ಮೂವರು ಮಕ್ಕಳು ಕೊಲೆಯಾಅದ್ದರು. ಆರೋಪಿಯ 85 ವರ್ಷದ ತಂದೆ ಲಕ್ಷ್ಮೀನಾಥ್ ಝಾ ಮಾತ್ರ ಬದುಕುಳಿದಿರುವುದು ಕಂಡುಬಂದಿದೆ.
.
ಕುಟುಂಬ ಕಲಹದಿಂದ ಗಲಾಟೆಯಾಗಿ ಆರೋಪಿ ಈ ಘೋರ ಕೃತ್ಯವೆಸಗಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಗಿದೆ. ಪಶ್ಚಿಮ ಡಿಸಿಪಿ ಪ್ರಶಾಂತ್ ಕಿರಣ್ ಮಾಹಿತಿ ಪ್ರಕಾರ ಕೃತ್ಯಕ್ಕೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ಕುಟುಂಬಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಮತ್ತು ಶ್ವಾನದಳ ಸ್ಥಳಕ್ಕೆ ಆಗಮಿಸಿ ರಕ್ತದ ಮಾದರಿಗಳನ್ನು ಹಾಗೂ ಕೊಲೆಗೆ ಬಳಸಲಾದ ಇಟ್ಟಿಗೆಯನ್ನು ವಶಕ್ಕೆ ಪಡೆದಿದ್ದಾರೆ ಎಂದರು..
ಕೊಲೆ ಬಳಿಕನಾಪತ್ತೆಯಾಗಿರುವ ಆರೋಪಿ ರಾಹುಲ್ ಝಾ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು ತೀವ್ರ ಶೋಧ ನಡೆಸಲಾಗುತ್ತಿದೆ. ನಗರದ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

