BIG NEWS: ಜನಪ್ರತಿನಿಧಿಯಾಗಿ ಜವಾಬ್ದಾರಿಯಿಂದ ಮಾತನಾಡಿ: ಸಚಿವ ಎಂ.ಬಿ.ಪಾಟೀಲ್ ಗೆ ಪ್ರಕಾಶ್ ರೈ ತಿರುಗೇಟು

ಬೆಂಗಳೂರು: ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ನಟ ಪ್ರಕಾಶ್ ರೈ ಅವರಿಗೆ ಸಚಿವ ಎಂ.ಬಿ.ಪಾಟೀಲ್ ತೀಕ್ಷ್ಣವಾಗಿ ಉತ್ತರಿಸಿದ್ದರು. ಪ್ರಕಾಶ್ ರೈ ಬೇರೆ ಕಡೆ ಹೋರಾಟ ಮಾಡಲಿ ಎಂದಿದ್ದರು. ಸಚಿವರ ಈ ಹೇಳಿಕೆಗೆ ಇದೀಗ ಪ್ರಕಾಶ್ ರೈ ತಿರುಗೇಟು ನೀಡಿದ್ದಾರೆ.

ದೇವನಹಳ್ಳಿ ರೈತರ ಸಮಸ್ಯೆ ಬಗ್ಗೆ ಇಲ್ಲಿಯೇ ಹೋರಾಟ ಮಾಡಬೇಕು. ನಾವು ದೇಶದ ಹಲವು ಕಡೆ ಹೋರಾಟ ಮಾಡಿದ್ದೇವೆ. ತಮಿಳುನಾಡಿನ ರೈತರ ಪರ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದೇನೆ. ಪಂಜಾಬ್ ನಲ್ಲಿ ರೈತರು ಹೋರಾಟ ಮಾಡಿದಾಗಲೂ ಭಾಗವಹಿಸಿದ್ದೆ. ಪ್ರಧಾನಿ ಮೋದಿಯವರಿಗೆ ನಿಮಗಿಂತ ಹೆಚ್ಚು ಪ್ರಶ್ನೆ ಮಾಡಿದವನು ನಾನು ಎಂದು ಗುಡುಗಿದ್ದಾರೆ.

ಆಯಾ ಹೋರಾಟಗಳನ್ನು ಆಯಾ ರಾಜ್ಯಗಳಲ್ಲಿಯೇ ನಾವು ಮಾಡುತ್ತೇವೆ. ನಾವು ಯಾವ ಪಕ್ಷದವರೂ ಅಲ್ಲ, ಜನರ ಪಕ್ಷದವರು. ಜನರಿಂದ ಆಯ್ಕೆಯಾದ ಜನಪ್ರತಿನಿಧಿಯಾಗಿ ಜವಾಬ್ದಾರಿಯಿಂದ ಮಾತನಾಡಿ ಎಂದು ತಿರುಗೇಟು ನೀಡಿದ್ದಾರೆ.

ದೇವನಹಳ್ಳಿ ರೈತರ ವಿಚಾರವಾಗಿ ಕಾನೂನು ರೀತಿ ಪರಿಹಾರ ಹುಡುಕಿ. ನಿಮ್ಮ ಕಡೆ ಆಗದಿದ್ದರೆ ನಮ್ಮ ಬಳಿಯೇ ಬನ್ನಿ. ಕೆಐಎಡಿಬಿ ಭೂಸ್ವಾಧೀನ ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚಿಸಿ. ನಮ್ಮ ಬಳಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರಿದ್ದಾರೆ. ಅವರ ಬಳಿ ಸಲಹೆ ಕೇಳೋಣ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read