HomeKarnatakaಕುಂಭಮೇಳದಲ್ಲಿ ಸ್ನಾನ ಮಾಡಿದ ಫೋಟೋ ವೈರಲ್: ಅಪಪ್ರಚಾರ ಮಾಡಿದವರ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಕುಂಭಮೇಳದಲ್ಲಿ ಸ್ನಾನ ಮಾಡಿದ ಫೋಟೋ ವೈರಲ್: ಅಪಪ್ರಚಾರ ಮಾಡಿದವರ ವಿರುದ್ಧ ನಟ ಪ್ರಕಾಶ್ ರಾಜ್ ದೂರು

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಪುಣ್ಯಸ್ನಾನ ಮಾಡಿದ್ದಾರೆ ಎನ್ನಲಾದ ಫೋಟೋ ವೈರಲ್ ಆಗಿರುವ ಬಗ್ಗೆ ನಟ ಪ್ರಕಾಶ್ ರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ.

ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿರುವ ಫೋಟೋ ವೈರಲ್ ಮಾಡಿದರವರ ವಿರುದ್ಧ ದೂರು ಕೊಡಲು ಪ್ರಕಾಶ್ ರೈ ಮುಂದಾಗಿದ್ದಾರೆ. ತಮ್ಮ ಫೋಟೋವನ್ನು ಬಳಸಿ ಅಪಪ್ರಚಾರ ಮಾಡುತ್ತಿರುವುದಾಗಿ ಮೈಸೂರಿನ ಪೊಲೀಸರಿಗೆ ದೂರು ನೀಡಲು ನಟ ಪ್ರಕಾಶ್ ರೈ ಮುಂದಾಗಿದ್ದಾರೆ.

ಮಹಾಕುಂಭಮೇಳದಲ್ಲಿ ನಟ ಪ್ರಕಾಶ್ ರಾಜ್ ಪುಣ್ಯಸ್ನಾನ ಮಾಡಿದ್ದಾರೆ ಎಂಬ ಎಐ ರಚಿತ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪ್ರಶಾಂತ್ ಸಂಬರಗಿ ಹಂಚಿಕೊಂಡಿದ್ದರು. ಈ ಫೋಟೋ ವಿರುದ್ಧ ಪ್ರಕಾಶ್ ರಾಜ್ ಅಸಮಾಧಾನ ವ್ಯಕ್ತಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular