HomeEntertainmentBIG NEWS: ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ FIR...

BIG NEWS: ನಟ ಪ್ರಕಾಶ್ ರಾಜ್ ಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ FIR ದಾಖಲು

ಬೆಂಗಳೂರು: ನಟ, ನಿರ್ದೇಶಕ ಪ್ರಕಾಶ್ ರಾಜ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಾಹಿನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಯೂಟ್ಯೂಬ್ ವಾಹಿನಿಯೊಂದರಲ್ಲಿ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆ ಹಾಕುವಂತಹ ವಿಡಿಯೋಗಳನ್ನು ಅಪ್ ಲೋಡ್ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ಪ್ರಕಾಶ್ ರಾಜ್ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಯೂಟ್ಯೂಬ್ ವಾಹಿನಿ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 506, 504, 505ರ ಅಡಿ ಮೊಕದ್ದಮೆ ದಾಖಲಾಗಿದೆ.

ಆಗಸ್ಟ್ 14ರಂದು ಯೂಟ್ಯೂಬ್ ಚಾನಲ್ ನಲ್ಲಿ ಜೀವ ಬೆದರಿಕೆ ಹಾಕುವ ಸಂದೇಶದ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು. ಎರಡು ವಿಡಿಯೋಗಳ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪ್ರಕಾಶ್ ರಾಜ್ ದೂರು ನೀಡಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular