HomeEntertainmentBIG NEWS: ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

BIG NEWS: ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು: ಸದಾಕಾಲ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುವ ನಟ, ನಿರ್ದೇಶಕ ಪ್ರಕಾಶ ರಾಜ್, ಇದೀಗ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಭಾರಿ ಚರ್ಚೆಗೆ ಕಾರಣರಾಗಿದ್ದಾರೆ.

ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ರಾಮ-ರಾವಣರ ಪಾತ್ರಗಳ ಬಗ್ಗೆ ಅವರು ಸೃಷ್ಟಿಸಿದ ಹೊಸ ಕಥೆ ಹಾಗೂ ಹಿಂದಿ ಹೇರಿಕೆ ವಿರೋಧಿಸಿ ಮಾಡಿದ ಟೀಕೆಗಳು ಜನರ ಭಾವನೆಗಳಿಗೆ ಧಕ್ಕೆ ತಂದಿವೆ. ಈ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕಾಶ್ ರಾಜ್ ಅವರು ವೇದಿಕೆ ಕಾರ್ಯಕ್ರಮವೊಂದರಲ್ಲಿ ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ ಎಂದಿದ್ದರು. ರಾಮ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ಚರ್ಚೆ ಹುಟ್ಟುಹಾಕಿದ್ದಾರೆ.

ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ ಲಕ್ಷ್ಮಣನಿಗೆ ಹಸಿವಾಗಿರುತ್ತದೆ. ಅಲ್ಲಿ ಹಣ್ಣಿನ ತೋಟ ಒಂದಿರುತ್ತದೆ. ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎನ್ನುತ್ತಾಳೆ. ಆಗ ರಾವಣ, ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾನೆ’ ಎಂದು ಕಥೆ ಆರಂಭಿಸಿದ್ದಾರೆ ಪ್ರಕಾಶ್ ರಾಜ್.

ಆ ಬಳಿಕ ರಾವಣ ಹಣ ಕೇಳುತ್ತಾನೆ. ರಾಮ ಇಲ್ಲ ಎನ್ನುತ್ತಾನೆ. 20 ಪರ್ಸೆಂಟ್ ಡಿಸ್ಕೌಂಟ್ ಕೊಡ್ತೀನಿ ಎಂದು ರಾವಣ ಹೇಳುತ್ತಾನೆ. ಹಣವೇ ಇಲ್ಲ ಎಂದಮೇಲೆ ಡಿಸ್ಕೌಂಟ್ ಕೊಟ್ಟು ಏನು ಪ್ರಯೋಜನ? ಅದೇ ರೀತಿ, ಹಿಂದಿ ಹೇರಿಕೆ ಮಾಡಬೇಡಿ. ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್ ಫೆಸ್ಟ್ ಮಾಡುತ್ತೇವೆ ಎಂದಿದ್ದಾರೆ ಪ್ರಕಾಶ್ ರಾಜ್. ಪ್ರಕಾಶ್ ರಾಜ್ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular