HomeKarnatakaಧಮ್ಕಿ ಹಾಕುವಷ್ಟು ಧೈರ್ಯ ನೀಡಿದವರು ಯಾರು? ಇನ್ಸ್ ಪೆಕ್ಟರ್ ಧನಂಜಯ್ ಅಮಾನತಿಗೆ ಕೇಂದ್ರ ಸಚಿವ ಪ್ರಲ್ಹಾದ್...

ಧಮ್ಕಿ ಹಾಕುವಷ್ಟು ಧೈರ್ಯ ನೀಡಿದವರು ಯಾರು? ಇನ್ಸ್ ಪೆಕ್ಟರ್ ಧನಂಜಯ್ ಅಮಾನತಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ

ಮೈಸೂರು: ಗಣೇಶ ಸಮಿತಿ ಯುವಕರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಟಿ.ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ್‌ ಅವರನ್ನು ಅಮಾನತುಗೊಳಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.

ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಟಿ. ನರಸೀಪುರದಲ್ಲಿ ಗಣೇಶೋತ್ಸವ ಆಚರಣೆ ವೇಳೆ ಗಣೇಶ ಸಮಿತಿ ಯುವಕರನ್ನು ಠಾಣೆಗೆ ಕರೆಸಿ ಇನ್ಸ್ ಪೆಕ್ಟರ್ ಧನಂಜಯ್ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಧನಂಜಯ್‌ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಕ್ತಿಭಾವದಿಂದ ಹಬ್ಬ ಆಚರಿಸಲು ಬಂದ ಯುವಕರಿಗೆ ಸಾರ್ವಜನಿಕವಾಗಿ ಇನ್ಸ್‌ಪೆಕ್ಟರ್‌ ಧಮ್ಕಿ ಹಾಕಿರುವುದು ಅಕ್ಷಮ್ಯ ಅಪರಾಧ ಎಂದು ಅವರು ಕಿಡಿಕಾರಿದ್ದಾರೆ. ನಮ್ಮದೇ ದೇಶದಲ್ಲಿ, ನಮ್ಮದೇ ನೆಲದಲ್ಲಿ ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಲು ಹಿಂದೂಗಳು ಗೋಗರೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿದೆ ಎಂದರೆ ಇದಕ್ಕಿಂತ ದುರ್ದೈವದ ಸಂಗತಿ ಇನ್ನೊಂದಿಲ್ಲ!

ಮೈಸೂರಿನ ಟಿ. ನರಸೀಪುರದ ಇನ್ಸ್‌ಪೆಕ್ಟರ್, ಗಣೇಶ ಸಮಿತಿಯ ಯುವಕರಿಗೆ ಸಾರ್ವಜನಿಕವಾಗಿ ಧಮ್ಕಿ ಹಾಕುವಷ್ಟು ಧೈರ್ಯ ನೀಡಿದವರು ಯಾರು? ಇದು ಪೊಲೀಸ್ ಇಲಾಖೆಗೆ ಗೃಹ ಸಚಿವರು ನೀಡಿದ ಅಧಿಕಾರವೋ ಅಥವಾ ಡಿ.ಕೆ. ಶಿವಕುಮಾರ್ ಅವರ ಕಾಂಗ್ರೆಸ್ ಸರ್ಕಾರದ ತುಷ್ಟಿಕರಣ ರಾಜಕಾರಣದ ಫರ್ಮಾನಾ? ಎಂದು ಪ್ರಶ್ನಿಸಿದ್ದಾರೆ.

ಸುವ್ಯವಸ್ಥೆ ಕಾಪಾಡಬೇಕಾದ ಅಧಿಕಾರಿಯೇ ಒಂದು ಸಮುದಾಯದ ಏಜೆಂಟ್‌ನಂತೆ ವರ್ತಿಸಿ, ಬೆದರಿಸುತ್ತಿರುವುದು ಅಕ್ಷಮ್ಯ ಅಪರಾಧ. ಭಕ್ತಿಭಾವದಿಂದ ಹಬ್ಬ ಆಚರಿಸಲು ಬಂದ ಯುವಕರಿಗೆ ಬೆದರಿಕೆ ಹಾಕಿರುವ ಇನ್ಸ್‌ಪೆಕ್ಟರ್ ಧನಂಜಯ್ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

ಕಾನೂನು ಮತ್ತು ಸುವ್ಯವಸ್ಥೆಯ ನೆಪವೊಡ್ಡಿ ಹಿಂದೂ ಹಬ್ಬಗಳ ಆಚರಣೆಯನ್ನೇ ಹತೋಟಿ ಮಾಡಲು ಹೊರಟಿರುವುದು ಈ ಸರ್ಕಾರದ ಹಿಂದೂ ವಿರೋಧಿ ಧೋರಣೆಗೆ ಹಿಡಿದ ಕನ್ನಡಿ. ನಮ್ಮ ಸನಾತನ ಸಂಸ್ಕೃತಿ, ಆಚರಣೆ ಹಾಗೂ ಭಕ್ತಿಭಾವದ ಮೇಲೆ ಧಕ್ಕೆ ತರಲು ಯತ್ನಿಸಿದರೆ ಅದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ! ಎಂದು ಗುಡುಗಿದ್ದಾರೆ.

ಹಬ್ಬದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಾದ್ಯಂತ ಪೊಲೀಸರು ಕಟ್ಟೆಚ್ಚವಹಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಮೈಸೂರು ಮತ್ತು ಟಿ. ನರಸೀಪುರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಇನ್ಸ್‌ಪೆಕ್ಟರ್ ಧನಂಜಯ್ ಗಣೇಶ ಸಮಿತಿ ಯುವಕರನ್ನು ಕರೆದು, ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋಗಬಾರದು. ಬೇರೆ ರಸ್ತೆಗಳ ಮೂಲ ಹೋಗಬೇಕು. ನಾವು ಯಾವ ರಸ್ತೆ ಮಾರ್ಗಗಳನ್ನು ಸೂಚಿಸುತ್ತೇವೆಯೋ ಅದೇ ಮಾರ್ಗದಲ್ಲಿ ಮೆರವಣಿಗೆ ಸಾಗಬೇಕು ಎಂದು ಹೇಳಿದ್ದರು.

ಅನಗತ್ಯವಾಗಿ ಮಸೀದಿಗಳ ಮುಂದೆ ಪಟಾಕಿ ಸಿಡಿಸುವುದು, ಮಸೀದಿಗಳ ಮುಂದೆ ಹೋಗಿ ಮೆರವಣಿಗೆ ನಿಲ್ಲಿಸಿ, ಕುಣಿಯುವುದು, ಗಲಭೆ ಸೃಷ್ಟಿಸುವುದು ಕಂಡುಬಂದರೆ ಅಂತವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಬಾರಿ ಇಂತಹ ಘಟನೆ ಕಂಡುಬಂದರೆ ಹೇಳುವುದಿಲ್ಲ ಮಾಡಿ ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ನಮ್ಮ ಹಬ್ಬವನ್ನು ನೋಡಿ ಬೇರೆಯವರು ಗೌರವ ಕೊಡಬೇಕು. ಯಾವ ಧರ್ಮವಾದರೇನು? ಅವರ ಧರ್ಮ ಅವರಿಗೆ ಹೆಚ್ಚು. ಗಣೇಶ ಹಬ್ಬದಂದು ಮಸೀದಿ ಮುಂದೆ ಹೋಗಿ ಕುಣಿಯಬೇಕೆಂದು ಎಲ್ಲಿಯೂ ಹೇಳಿಲ್ಲ. ನಮ್ಮ ಹಬ್ಬದ ಆಚರಣೆ ನೋಡಿ ಇತರರು ಗೌರವಿಸಲಿ ಎಂದು ಹೇಳಿಕೆ ನೀಡಿದ್ದರು.

ಲಿಂಕ್ ರಸ್ತೆಯಲ್ಲಿರುವ ಮಸೀದಿ ಬಳಿ ಗಣೇಶ ಮೆರವಣಿಗೆ ಸಾಗದಂತೆ ಷರತ್ತು ವಿಧಿಸಿದ್ದು, ಇದನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಇನ್ಸ್‌ಪೆಕ್ಟರ್ ಧನಂಜಯ್ ಸ್ಪಷ್ಟ ಎಚ್ಚರಿಕೆ ನೀಡಿದ್ದರು. ನನ್ನ ಗಮನಕ್ಕೆ ಬಂದರೆ ಹೇಳಲ್ಲ, ಮಾಡಿ ತೋರಿಸ್ತೀನಿ ಎಂದು ಎಚ್ಚರಿಕೆ ನೀಡಿದ್ದರು. ಇನ್ಸ್ ಪೆಕ್ಟರ್ ಧನಂಜಯ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇನ್ಸ್ ಪೆಕ್ಟರ್ ಅವರ ಈ ನಡೆ ಭಾರಿ ಚರ್ಚೆಗೆ ಕಾರಣವಾಗಿತ್ತಲ್ಲದೇ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular