HomeKarnatakaBIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ...

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನ ದರ್ಶನ್ ಫೋಟೋ ಹೊರಬಿಟ್ಟಿದ್ದೆ ಸರ್ಕಾರ. ರೇಣುಕಾಸ್ವಾಮಿ ಕೊಲೆ ಕರ್ನಾಟಕ ಕಂಡ ಅತ್ಯಂತ ಕ್ರೂರವಾದ ಹತ್ಯೆಯಾಗಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣಗಳ ಬಗ್ಗೆ ದೊಡ್ಡ ಚರ್ಚೆಯಾಯಿತು. ಈ ವಿಚಾರ ಡೈವರ್ಟ್ ಮಾಡಲು ದರ್ಶನ್ ಕೇಸ್ ಮುನ್ನೆಲೆಗೆ ತಂದರು. ರಾಜ್ಯ ಸರ್ಕಾರ ಸಂಕುಚಿತ ಷಡ್ಯಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರೇಣುಕಾಸ್ವಾಮಿ ಕ್ರೂರವಾಗಿ ಹತ್ಯೆಗೈದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ವಿಚಾರವನ್ನು ನ್ಯಾಯಾಲಯ ಕೂಡ ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಫೋಟೋ ಹೊರಗಡೆ ಬಿಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿಷಯ ಡೈವರ್ಟ್ ಮಾಡಲು ರಾಜ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular