HomeKarnatakaಕಡಿಮೆ ದರದಲ್ಲಿ ಕೇಳಿದಷ್ಟು ಅಕ್ಕಿ ಕೊಡಲು ಸಿದ್ದ, ಆದರೆ ಯಾವುದೇ ಬೇಡಿಕೆ ಬಂದಿಲ್ಲ: ಪ್ರಹ್ಲಾದ ಜೋಶಿ

ಕಡಿಮೆ ದರದಲ್ಲಿ ಕೇಳಿದಷ್ಟು ಅಕ್ಕಿ ಕೊಡಲು ಸಿದ್ದ, ಆದರೆ ಯಾವುದೇ ಬೇಡಿಕೆ ಬಂದಿಲ್ಲ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೇಳಿದಷ್ಟು ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಕೇಳಿದಷ್ಟು ಅಕ್ಕಿ ಕೊಡಲು ಸಿದ್ಧವಿರುವ ಬಗ್ಗೆ ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ತಿಳಿಸಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರದಿಂದ ಇದುವರೆಗೆ ಯಾವುದೇ ಬೇಡಿಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಪ್ರತಿ ಕೆಜಿ ಅಕ್ಕಿಗೆ 32 ರೂಪಾಯಿ ಇದ್ದ ಅಕ್ಕಿ ದರವನ್ನು 22.5 ರೂ.ಗೆ ಕಡಿತಗೊಳಿಸಲಾಗಿದೆ. ಈ ದರದಲ್ಲಿ ರಾಜ್ಯ ಸರ್ಕಾರ ಖರೀದಿಸಿ ಪಡಿತರ ಚೀಟಿದಾರರಿಗೆ ವಿತರಿಸಿದಲ್ಲಿ ರಾಜ್ಯಕ್ಕೆ ಪ್ರತಿ ತಿಂಗಳು 190 ಕೋಟಿ ರೂಪಾಯಿ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಎರಡು ಬಾರಿ ಆಹಾರ ಸಚಿವ ಮುನಿಯಪ್ಪ ಭೇಟಿಯಾಗಿ ಮಾತನಾಡಿದ್ದಾರೆ. ನಂತರ ಯಾವುದೇ ಪ್ರಕ್ರಿಯೆ ಆಗಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಜನರಿಗೆ ಅಕ್ಕಿ ವಿತರಿಸುವ ಕಾಳಜಿ ಇದ್ದಲ್ಲಿ ಅಕ್ಕಿ ಕೇಂದ್ರದಿಂದ ಅಕ್ಕಿ ಖರೀದಿಸಿ ವಿತರಿಸಬಹುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular