ಬಜೆಟ್ ಟೀಕಿಸಿದ ಸಿದ್ಧರಾಮಯ್ಯರಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ನವದೆಹಲಿ: ಕೇಂದ್ರ ಬಜೆಟ್ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿರುವುದಕ್ಕೆ ನವದೆಹಲಿಯಲ್ಲಿ ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನವರು ಹೆದ್ದಾರಿ, ರೈಲ್ವೆ ಇಲಾಖೆಗೆ ಏನು ಕೊಟ್ಟಿದ್ದರು? ನಾವು ಏನು ಕೊಟ್ಟಿದ್ದೇವೆ ಎನ್ನುವುದರ ಬಗ್ಗೆ ಚರ್ಚೆ ಮಾಡಲಿ. ಮಾಜಿ ಸಿಎಂ ಸಿದ್ದರಾಮಯ್ಯ ಶಬ್ದ ಬಳಸುವಾಗ ಹಿಡಿತವಿರಲಿ. ರಾಹುಲ್ ಗಾಂಧಿ ನಾಯಕರು ಎನ್ನು ಕಾರಣಕ್ಕೆ ಹೇಗೆಲ್ಲಾ ಮಾತನಾಡುತ್ತಿದ್ದಾರಾ? ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡ ಹಾಗೆ ಅನ್ನಿಸುತ್ತಿದೆ. ಸ್ಪರ್ಧಿಸಲು ಕ್ಷೇತ್ರ ಸಿಗದಿರುವುದು ಇದಕ್ಕೆಲ್ಲ ಕಾರಣವಾಗಿರಬಹುದು ಎಂದು ನವದೆಹಲಿಯಲ್ಲಿ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇಂದು ಕೇಂದ್ರ ಸರ್ಕಾರ ಐತಿಹಾಸಿಕ ಬಜೆಟ್ ಮಂಡಿಸಿದೆ. ಸುಮಾರು ವರ್ಷಗಳ ಬಳಿಕ ಹರ್ಷದಾಯಕ ಬಜೆಟ್ ಮಂಡನೆಯಾಗಿದೆ. ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡಿದ್ದಾರೆ. ಮೋದಿ ಹಾಗೂ ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮೂಲಕ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿದೆ. ಕೇಂದ್ರ ಬಜೆಟ್ ನಲ್ಲಿ ಹಲವಾರು ಉಪಕ್ರಮ ಕೈಗೊಳ್ಳಲಾಗಿದೆ. ಸ್ಟಾರ್ಟ್ ಅಪ್ ದೃಷ್ಟಿಯಿಂದ ಬಹುದೊಡ್ಡ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read