HomeKarnatakaBREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ, ವಾಪಸ್ ಕಳಿಸಿದ ಪೊಲೀಸರು

BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶಕ್ಕೆ ನಿಷೇಧ, ವಾಪಸ್ ಕಳಿಸಿದ ಪೊಲೀಸರು

ಶಿವಮೊಗ್ಗ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶಿವಮೊಗ್ಗ ಪ್ರವೇಶಿಸಿದಂತೆ ತಡೆದು ವಾಪಸ್ ಕಳುಹಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿದೆ. ಫೆಬ್ರವರಿ 28 ರಿಂದ 7 ದಿನಗಳ ಕಾಲ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾದ ಲವ್ ಜಿಹಾದ್ ಪುಸ್ತಕ ಬಿಡುಗಡೆಗಾಗಿ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ನಂತರ ಭದ್ರಾವತಿಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಿತ್ತು. ಆದರೆ, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ -ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್ ನಲ್ಲಿ ಪ್ರಮೋದ್ ಮುತಾಲಿಕ್ ಅವರ ಕಾರ್ ತಡೆದ ಪೊಲೀಸರು ಆದೇಶ ಪ್ರತಿ ತೋರಿಸಿ ಶಿವಮೊಗ್ಗ ಪ್ರವೇಶಿಸದಂತೆ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮೋದ್ ಮುತಾಲಿಕ್ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ. ಕಾಂತೇಶ್, ದೀನದಯಾಳು, ರಾಜೇಶ್ ಶಾಸ್ತ್ರಿ ಸೇರಿದಂತೆ ಹಲವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ರಸ್ತೆಯಲ್ಲಿಯೇ ಲವ್ ಜಿಹಾದ್ ಪುಸ್ತಕ ಮತ್ತು ಪೋಸ್ಟರ್ ಗಳನ್ನು ಪ್ರಮೋದ್ ಮುತಾಲಿಕ್ ಬಿಡುಗಡೆ ಮಾಡಿ ಕಾರ್ ನಲ್ಲಿಯೇ ಕುಳಿತು ಊಟ ಮಾಡಿದ್ದಾರೆ. ತಡರಾತ್ರಿಯೇ ಪೊಲೀಸರು ಪ್ರಮೋದ್ ಮುತಾಲಿಕ್ ಅವರನ್ನು ಜಿಲ್ಲೆಯ ಗಡಿ ದಾಟಿಸಿದ್ದು, ಎನ್.ಆರ್. ಪುರಕ್ಕೆ ಬಿಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular