HomeKarnatakaBIG NEWS: ದರ್ಮಸ್ಥಳ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್...

BIG NEWS: ದರ್ಮಸ್ಥಳ ಕೇಸ್: ನಟ ಪ್ರಕಾಶ್ ರಾಜ್ ವಿರುದ್ಧ ವಿಶೇಷ ತನಿಖೆ ಆಗಲಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೆಳಗಾವಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿರುವ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಹೆಸರನ್ನು ಕೂಡ ಉಲ್ಲೇಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ನಟ ಪ್ರಕಾಶ್ ರಾಜ್ ವಿರುದ್ಧ ಶ್ರೀರಾಮಸೇನೆ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಕನ್ನಡ ಭವನದ ಬಳಿ ಸೇರಿದ ಶ್ರೀರಾಮಸೇನೆ ಕಾರ್ಯಕರ್ತರು, ಪ್ರಕಾಶ್ ರಾಜ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಕಾಶ್ ರಾಜ್ ಓರ್ವ ಧರ್ಮದ್ರೋಹಿ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನೆ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ಹೆಸರು ಕೆಡಿಸುವ ಮತ್ತು ಅದಕ್ಕೆ ಅಪಖ್ಯಾತಿ ತರುವ ದೊಡ್ಡದೊಂದು ಪಿತೂರಿಯ ಹಿಂದೆ ಬಹುಭಾಷಾ ನಟ ಪ್ರಕಾಶ್ ರಾಜ್ ಕೈವಾಡವಿದ್ದು, ಕೂಡಲೇ ವಿಶೇಷ ತನಿಖಾ ತಂಡ  ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ನಟನ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಬೇಕು. ಧರ್ಮಸ್ಥಳದ ತಲೆಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ಎಂಬಾತನೇ ಈ ಇಡೀ ಪ್ರಕರಣದ ಮುಖ್ಯ ಸಂಚುಕೋರ ನಟ ಪ್ರಕಾಶ್ ರಾಜ್ ಎಂದು ಹೆಸರಿಸಿದ್ದಾನೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಕಾಶ್ ರಾಜ್ ಅವರನ್ನು ವಶಕ್ಕೆ ಪಡೆಯಬೇಕು ಎಂದರು.

ಇದರೊಂದಿಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿರುವ ನಟನ ವಿರುದ್ಧ ಪೊಲೀಸರು ತಾವಾಗಿಯೇ ಮುಂದೆ ಬಂದು ಸ್ವಯಂಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸನಾತನ ಧರ್ಮ ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ಅಪಪ್ರಚಾರ ಹಾಗೂ ಸಂಚು ರೂಪಿಸಲಾಗುತ್ತಿದೆ. ಈ ಪಿತೂರಿಯಲ್ಲಿ ಕಾಂಗ್ರೆಸ್ ನಾಯಕರು, ಎಡಪಂಥೀಯರು, ಕೆಲವು ಬುದ್ದಿಜೀವಿಗಳು ಹಾಗೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಒಂದು ಭಾಗ ಶಾಮೀಲಾಗಿದೆ. ಹಿಂದೂ ಧರ್ಮದ ವಿರುದ್ಧ ಸದಾ ವಿಷ ಕಾರುವ ನಟ ಪ್ರಕಾಶ್ ರಾಜ್ ಅವರನ್ನು ಚಿತ್ರರಂಗದಿಂದಲೇ ಸಂಪೂರ್ಣವಾಗಿ ಬಹಿಷ್ಕರಿಸಬೇಕು ಎಂದು ಗುಡುಗಿದರು.

ಈ ನಿಟ್ಟಿನಲ್ಲಿ ಅವರನ್ನು ಸಿನಿಮಾಗಳಿಂದ ದೂರ ಇಡುವಂತೆ ಒತ್ತಾಯಿಸಿ ಕನ್ನಡ, ತೆಲುಗು ಹಾಗೂ ತಮಿಳು ಚಲನಚಿತ್ರ ವಾಣಿಜ್ಯ ಮಂಡಳಿಗಳಿಗೆ ಶ್ರೀರಾಮ ಸೇನೆ ವತಿಯಿಂದ ಅಧಿಕೃತವಾಗಿ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದರು.

ಧರ್ಮಸ್ಥಳದ ಘನತೆಗೆ ಮಸಿ ಬಳಿಯುವ ಏಕೈಕ ಉದ್ದೇಶದಿಂದಲೇ ಈ ಇಡೀ ಪ್ರಕರಣದಲ್ಲಿ ಸುಜಾತಾ ಭಟ್ ಎಂಬಾಕೆಯನ್ನು ದಾಳವಾಗಿ ಬಳಸಿಕೊಳ್ಳಲಾಗಿದೆ. ನಿಜವಾಗಿ ಅಸ್ತಿತ್ವದಲ್ಲೇ ಇಲ್ಲದ ಅನನ್ಯಾ ಭಟ್ ಎಂಬ ಯುವತಿಯನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಸುಳ್ಳು ಮತ್ತು ಗಂಭೀರ ಆರೋಪಗಳನ್ನು ಸೃಷ್ಟಿಸಲಾಯಿತು. ಪವಿತ್ರ ಕ್ಷೇತ್ರವನ್ನು ತೇಜೋವಧೆ ಮಾಡಲು ಮತ್ತು ಈ ಸಂಚನ್ನು ರೂಪಿಸಲು ನಟ ಪ್ರಕಾಶ್ ರಾಜ್ ಅವರಿಗೆ ಕೇರಳದಿಂದ ಬರೋಬ್ಬರಿ ₹200 ಕೋಟಿ ಹಣದ ನೆರವು ಹರಿದುಬಂದಿದೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯು ಯಾವುದೇ ಪ್ರಭಾವಕ್ಕೆ ಒಳಗಾಗದೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದೂ ಅವರು ಒತ್ತಾಯಿಸಿದರು.

ಇದೇ ವೇಳೆ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊ. ಭಗವಾನ್, ಶ್ರೀರಾಮನ ಚಾರಿತ್ಯದ ಬಗ್ಗೆ ಅತ್ಯಂತ ಹಗುರವಾಗಿ ಮತ್ತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದರು.

ಕೋಟ್ಯಂತರ ಹಿಂದೂಗಳ ಧಾರ್ಮಿಕ ನಂಬಿಕೆಗೆ ಭಗವಾನ್ ಧಕ್ಕೆ ತಂದಿದ್ದರೂ ಸಹ ರಾಜ್ಯ ಸರ್ಕಾರ ಅವರ ವಿರುದ್ಧ ಯಾವುದೇ ಕಠಿಣ ಕಾನೂನು ಕ್ರಮ ಕೈಗೊಂಡಿಲ್ಲ. ಸರ್ಕಾರದ ಧೋರಣೆಯನ್ನು ಖಂಡಿಸಿದ ಅವರು, ಶ್ರೀರಾಮನಿಗೆ ಅವಮಾನ ಮಾಡಿರುವ ಪ್ರೊ. ಭಗವಾನ್ ವಿರುದ್ಧ ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ಶೀಘ್ರದಲ್ಲೇ ಶ್ರೀರಾಮ ಸೇನೆ ವತಿಯಿಂದ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular