ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಚನೆಯಾಗಿರುವ ಎಸ್ ಐಟಿ ತಂಡದ ಮುಖ್ಯಸ್ಥ ಪ್ರಣವ್ ಮೊಹಂತಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿದ್ದಾರೆ.
ವಿಧಾನಸೌಧದಲ್ಲಿ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಸಿಎಸ್ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಧರ್ಮಸ್ಥಳ ಪ್ರಕರಣದ ತನಿಖಾ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿರುವ ಸಾಧ್ಯತೆ ಇದೆ.
ಇನ್ನು ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರು ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದು, ಈ ಬಗ್ಗೆಯೂ ಸಿಎಸ್ ಶಾಲಿನಿ ರಜನೀಶ್ ಅವರಿಗೆ ಮಾಹಿತಿ ನೀಡಿ, ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.