ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಡಿಜಿಪಿ ಪ್ರಣವ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ.
ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ ಐಟಿ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿರುವಾಗಲೇ ಅವರು ಸಿಬಿಐ ಹಾಗೂ ಎನ್ ಐಎ ನಂತಹ ಮಹಾನಿರ್ದೇಶಕಾರಾಗುವ ಅರ್ಹತೆ ಪಡೆದಿದ್ದಾರೆ. ಒಂದುವೇಳೆ ಅವರು ಕೇಂದ್ರ ಸೇವೆಗೆ ಹೋದರೆ ಬೇರೆ ಅಧಿಕಾರಿಯನ್ನು ಎಸ್ ಐಟಿ ತಂಡದ ಮುಖ್ಯಸ್ಥರನ್ನಾಗಿ ನೇಮಿಸಲಗೌವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಒಂದುವೇಳೆ ಪ್ರಣವ್ ಮೊಹಂತಿಯವರು ಕೇಂದ್ರಕ್ಕೆ ಹೋದರೆ ಎಸ್ ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು. ಕೇಂದ್ರ ಸೇವೆಗೆ ವರ್ಗಾವಣೆಗೊಂಡರೂ ಎಸ್ ಐಟಿ ತನಿಖೆಯನ್ನು ಮುಂದುವರೆಸಲು ಅವಕಾಶವಿದೆಯೇ ಎಂಬುದನ್ನೂ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.