BREAKING : ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ‘ಲೈಂಗಿಕ ದೌರ್ಜನ್ಯ’ ಆರೋಪ..!

ರಾಯಚೂರು: ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲುಕಿನ ಸುಲ್ತಾನ್ ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.

ಮಠದ ಸೇವೆಗೆ ಬಂದಿದ್ದ ಮಹಿಳೆ ಮೇಲೆ ಸ್ವಾಮೀಜಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕಳೆದ 6 ತಿಂಗಳಿಂದ ಪುತ್ರಿ ಜೊತೆ ಮಠದಲ್ಲಿಯೇ ವಸವಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾಗಿದೆ. ಸಂತ್ರಸ್ತೆ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಪೊಲೀಸ್ ಠಾಣೆಗೆ ತೆರಳಿದ್ದರು. ಠಾಣೆಯ ವಿಜಿಟರ್ ಬುಕ್ ನಲ್ಲಿ ಹೆಸರು, ವಿಳಾಸ ದಾಖಲಿಸಿದ್ದರು. ಬಳಿಕ ಎಲ್ಲಿಯೂ ಕಾಣಿಸಿಕೊಳ್ಳದೇ ಮಗಳ ಜೊತೆ ತೆರಳಿದ್ದ ಮಹಿಳೆಯ ಫೋನ್ ಸ್ವಿಚ್ಡ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಇದ್ದಕ್ಕಿದ್ದಂತೆ ಮಹಿಳೆ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read