HomeKarnatakaಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿ

ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕೆ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿ

ಪ್ರಸಕ್ತ (2026-27) ಸಾಲಿನ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕೊಡಗು ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯ ಅಧೀನದಲ್ಲಿ ಬರುವ 03 ಬಿ.ಆರ್‍ಸಿ ಕೇಂದ್ರಗಳಾದ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ತಾಲ್ಲೂಕುಗಳಲ್ಲಿ ತಲಾ ಒಬ್ಬರಂತೆ 03 ಮಾನಸಿಕ ಆರೋಗ್ಯ ಸಲಹೆಗಾರರ ನೇಮಕಾತಿ ಮಾಡುವ ಸಂಬಂಧ ಅಭ್ಯರ್ಥಿಗಳಿಂದ 02ನೇ ಬಾರಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೆಪ್ಟೆಂಬರ್, 09 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಸಮಗ್ರ ಶಿಕ್ಷಣ ಅಭಿಯಾನ, ಕೊಡಗು ಜಿಲ್ಲೆ, ಮಡಿಕೇರಿ ರವರ ಕಚೇರಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸಿಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ, ಎಂ.ಎಸ್.ಸಿ ಪದವಿಯನ್ನು ಹೊಂದಿರಬೇಕು.

ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ, ಕನ್ನಡ, ಇಂಗ್ಲಿಷ್ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಇವರ ಕಚೇರಿ ಸುತ್ತೋಲೆ ಸಂಖ್ಯೆ:SSK/M&D/ಸಮಾಲೋಚಕರು/05/26-27.ದಿ:30.07.26. ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಕರ್ನಾಟಕ ಇವರ ಕಚೇರಿ ಸುತ್ತೋಲೆ ಸಂಖ್ಯೆ:SSK/M&D/ಸಮಾಲೋಚಕರು/05/26-27.ದಿ:11.08.26.

06 ತಿಂಗಳಿಗೆ ಮಾತ್ರ ಸೇವೆ ಪಡೆಯಲಾಗುವುದು. ವಯೋಮಿತಿ 28-40 ವರ್ಷ ಒಳಪಟ್ಟವರನ್ನು ಮಾತ್ರ ಪರಿಗಣಿಸಲಾಗುವುದು. ಶಾಲಾ ಶಿಕ್ಷಣ ಇಲಾಖೆಯಿಂದ ಕಾಲ ಕಾಲಕ್ಕೆ ಹೊರಡಿಸುವ ಅದೇಶಗಳನ್ವಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.9448999344, 9448999400 ಹಾಗೂ ಉಪ ನಿರ್ದೇಶಕರು ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಹಾಗೂ ಉಪ ನಿರ್ದೇಶಕ ಮಹೇಶ್ ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular