HomeKarnatakaಸುಳ್ಳು ದೂರು ದಾಖಲಿಸಿ ವಂಚನೆ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್

ಸುಳ್ಳು ದೂರು ದಾಖಲಿಸಿ ವಂಚನೆ ಆರೋಪ: ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್

ಬೆಂಗಳೂರು: ಸುಳ್ಳು ದೂರು ಸಲ್ಲಿಸಿ ವಂಚನೆ ಎಸಗಿದ ಆರೋಪದ ಮೇಲೆ ಪ್ರಶಾಂತ್ ಸಂಬರಗಿ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಉದ್ಯಮಿ ದೇವನಾಥ್ ಅವರು ದೂರು ನೀಡಿದ್ದಾರೆ. 2008 ರಲ್ಲಿ ದೇವನಾಥ್ ಅವರು ಪ್ರಶಾಂತ್ ಸಂಬರಗಿಯಿಂದ ಸಾಲ ಪಡೆದುಕೊಂಡಿದ್ದರು. ಮನೆಯ ದಾಖಲೆ, ಖಾಲಿ ಚೆಕ್ ಶ್ಯೂರಿಟಿ ನೀಡಿದ್ದರು. 2017ರ ಡಿಸೆಂಬರ್ ನಲ್ಲಿ ದೂರುದಾರ ಹಣ ವಾಪಸ್ ಮಾಡಿದ್ದು, ಹೆಚ್ಚಿನ ಬಡ್ಡಿ ಮತ್ತು ಹಣ ನೀಡಬೇಕೆಂದು ಮನೆಯ ದಾಖಲೆ ನೀಡದೇ ಪ್ರಶಾಂತ್ ಸಂಬರಗಿ ಸತಾಯಿಸಿದ್ದಾರೆ. ಅಲ್ಲದೇ, ವಿವಿಧ ಠಾಣೆಗಳಲ್ಲಿ ದೇವನಾಥ್ ವಿರುದ್ಧ ಸುಳ್ಳು ದೂರು ನೀಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular