BIG BREAKING: ಸಂಸದ ಪ್ರತಾಪ್ ಸಿಂಹ ಸೋದರ ವಿಕ್ರಂ ಸಿಂಹ ವಶಕ್ಕೆ

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಅರಣ್ಯ ಭವನದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 16ರಲ್ಲಿ ಅಕ್ರಮವಾಗಿ 126 ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆಯಲಾಗಿದೆ.

ಮೈಸೂರು -ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರರಾಗಿರುವ ವಿಕ್ರಮ್ ಸಿಂಹ ಶುಂಠಿ ಬೆಳೆಯಲು ಜಮೀನು ಲೀಸ್ ಗೆ ಪಡೆದುಕೊಂಡಿದ್ದು, ಅದಕ್ಕೆ ಹೊಂದಿಕೊಂಡ ಅರಣ್ಯ ಜಾಗದಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಿದ್ದಾರೆ. ಈ ಸಂಬಂಧ ವಿಕ್ರಂ ಸಿಂಹ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅನುಮತಿ ಇಲ್ಲದೆ ಮರ ಕಡಿಯುವುದು ಅಪರಾಧವಾಗಿದ್ದರೂ, ಸರ್ಕಾರಿ ಜಮೀನಿನಲ್ಲಿ 126 ಮರಗಳನ್ನು ಕಡಿಯಲಾಗಿದೆ. ಹೀಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ಕರ್ತವ್ಯ ಲೋಪಕ್ಕೆ ಸಾಕ್ಷಿಯಾಗಿದೆ ಎಂದು ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್, ಹಾಸನ ಉಪ ವಿಭಾಗದ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಬಿರಾದಾರ, ಬೇಲೂರು ವಲಯ ಅರಣ್ಯ ಅಧಿಕಾರಿ ವಿನಯಕುಮಾರ್, ಉಪವಲಯ ಅರಣ್ಯ ಅಧಿಕಾರಿ ಗುರುರಾಜ್, ಅರಣ್ಯ ಗಸ್ತು ಪಾಲಕ ರಘುಕುಮಾರ್ ಅವರನ್ನು ಅಮಾನತು ಮಾಡಲಾಗಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read