ಕೋಟ್ಯಂತರ ರೂ. ಬೆಲೆ ಬಾಳುವ ಮರಗಳ ಕಡಿದು ಅಕ್ರಮ ಸಾಗಣೆ: ಸಂಸದ ಪ್ರತಾಪ್ ಸಿಂಹ ಸೋದರನ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅಕ್ರಮವಾಗಿ ಕಡಿದು ಸಾಗಣೆ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ದಕ್ಷ ಅಧಿಕಾರಿ ತಹಶೀಲ್ದಾರ್ ಮಮತಾ ಅವರ ಮೂಲಕ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆ ಕೆಲವು ಅಧಿಕಾರಿಗಳು ಕೂಡ ಬೆಲೆ ಬಾಳುವ ಮರಗಳ ಕಡಿದು ಸಾಗಿಸಲು ವಿಕ್ರಮ್ ಸಿಂಹ ಅವರೊಂದಿಗೆ ಕೈಜೋಡಿಸಿರುವುದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಗಮನಕ್ಕೆ ಬಂದಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ.

ಅಣ್ಣ ಪ್ರತಾಪ್ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ, ತಮ್ಮ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read