ಬೆಂಗಳೂರು: ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ, ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ದೇವೇಗೌಡರು, ಮಹದೇವಪ್ಪ, ಯಡಿಯೂರಪ್ಪ ನೆಲದಿಂದ ಬೆಳೆದು ಬಂದು ನಾಯಕರಾಗಿದ್ದಾರೆ. ಮುಂದಿನ ಪೀಳಿಗೆಗೆ ಅವರು ಏನು ಕೊಟ್ಟರು ಎನ್ನುವುದು ಪ್ರಶ್ನೆ. ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ದೇವರಾದರು. ಆದರೆ, ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಖರ್ಗೆ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು?! pic.twitter.com/tb1liXDd3b
— Prathap Simha (@mepratap) July 29, 2024