ಬೆಂಗಳೂರು: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ.
ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.