HomeKarnatakaBIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

BIG NEWS: ಸಂಸದ ಪ್ರತಾಪ್ ಸಿಂಹಗೆ ಮತ್ತೊಂದು ಸಂಕಷ್ಟ; ಮೈಸೂರು ಲೋಕಸಭಾ ಕ್ಷೇತ್ರ ಕೈತಪ್ಪುವ ಸಾಧ್ಯತೆ

ಮೈಸೂರು: ಸಂಸತ್ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ಎಫ್ ಐ ಆರ್ ದಾಖಲಾಗಿದೆ. ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವಾಗಲೇ ಈಗ ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪುವ ಆತಂಕವು ಎದುರಾಗಿದೆ.

ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಸೆಳೆಯಲು ಯತ್ನಿಸಿದೆ. ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ವಿಚಾರ ಮಾತುಕತೆಯಲ್ಲಿರುವಾಗಲೇ ಮೈಸೂರು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆ ಇಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಸಂಸದರಾಗಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜೀವನ ಚರಿತ್ರೆ ಪುಸ್ತಕ ಬರೆಯುವ ಮೂಲಕ ಹೈಕಮಾಂಡ್ ಆಪ್ತ ಪರ್ತಕರ್ತರಾಗಿದ್ದಾರೆ. ಆದರೆ ಈ ಬಾರಿ ಸಂಸತ್ ಭದ್ರತಾ ಲೋಪ ಪ್ರಕರಣ ಘಟನೆಯಿಂದಾಗಿ ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಮಧ್ಯೆ ಜೆಡಿಎಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular