HomeKarnatakaಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ಯತ್ನ: ಹಲವರು ಪೊಲೀಸ್ ವಶಕ್ಕೆ

ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ಯತ್ನ: ಹಲವರು ಪೊಲೀಸ್ ವಶಕ್ಕೆ

ಮೈಸೂರು: ಲೋಕಸಭೆ ಸದಸ್ಯ ಪ್ರತಾಪ್ ಸಿಂಹ ಅವರ ಪಾಸ್ ಪಡೆದು ಸಂಸತ್ ಭವನಕ್ಕೆ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಜಲದರ್ಶಿನಿ ಮುಂಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಎದುರು ಜಮಾವಣೆಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ತಡೆದಿದ್ದಾರೆ. ಕಾಂಪೌಂಡ್ ಹಾರಿ ಹಲವರು ಪ್ರತಾಪ್ ಸಿಂಹ ಅವರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದು, ಮತ್ತೆ ಕೆಲವರು ಮೈಸೂರು -ಮಡಿಕೇರಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ ಪೊಲೀಸರು ಕೊನೆಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ಜಲದರ್ಶಿನಿ ಅತಿಥಿಗೃಹದ ಬಳಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular