ಮೈಸೂರು: ಆರ್.ಎಸ್.ಎಸ್ ನಿಷೇಧ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಹರು ಕೈಯಲ್ಲಿಯೇ ಆರ್.ಎಸ್.ಎಸ್ ನಿಷೇಧ ಮಾಡಲು ಸಾಧ್ಯವಾಗಿಲ್ಲ ಇನ್ನು ನಿಮ್ಮಿಂದ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಪ್ರಿಯಾಂಕ್ ಖರ್ಗೆ ಅವರೇ ಆರ್.ಎಸ್.ಎಸ್ ಬ್ಯಾನ್ ಮಾಡುವ ವಿಚಾರವಾನ್ನು ಮರೆತುಬಿಡಿ. ನೆಹರು ಕೈಯಲ್ಲೇ ಆಗಿಲ್ಲ. ಇನ್ನು ಅವರ ಮರಿ ಮೊಮ್ಮಗಳ ಹೆಸರು ಇಟ್ಟುಕೊಂಡಿರುವ ನಿಮ್ಮ ಕೈಯಲ್ಲಿ ಸಾಧ್ಯವಿಲ್ಲ ಎಂದಿದ್ದಾರೆ.
ಪ್ರಿಯಾಂಕ್ ಖರ್ಗೆಯವರು ಮೂರು ತಿಂಗಳಿಗೊಮ್ಮೆ ಆರ್.ಎಸ್.ಎಸ್ ನ್ನು ಬೈಯ್ದು ತಮ್ಮ ಅಸ್ತಿತ್ವ ತೋರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಎಮ್ಮೆ ಮೇಲೆ ಮಳೆ ಸುರಿದರೆ ಪ್ರಯೋಜನವಿಲ್ಲ. ಅದೇ ರೀತಿ ಪಿಯುಸಿ ಫೇಲ್ ಆಗಿರುವ ಪ್ರೊಯಾಂಕ್ ಖರ್ಗೆಗೆ ಬುದ್ಧಿ ಹೇಳಿದರೂ ಅರ್ಥವಾಗಲ್ಲ ಪ್ರಚಾರದ ಹುಚ್ಚು ಗೀಳು ಜಾಸ್ತಿಯಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.