HomeKarnatakaBIG NEWS: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

BIG NEWS: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು

ಮೈಸೂರು: ಸಂಸದ ಪ್ರತಾಪ್ ಸಿಂಹ ಏನು ನ್ಯಾಷನಲ್ ಲೀಡರಾ? ಎಂದು ಕೇಳಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಾಪ್ ಸಿಂಹ, ಯತೀಂದ್ರ ಮೈಸೂರು ಭಾಗದ ದೊಡ್ಡ ನ್ಯಾಷನಲ್ ಲಿಡರು ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವವರು ನ್ಯಾಷನಲ್ ಲೀಡರ್ ಎಂದು ತಿರುಗೇಟು ನೀಡಿದ್ದಾರೆ.

ಅಪ್ಪನ ನೆಲೆ ಬಿಡಿಸಿ ಬಾದಾಮಿಗೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಎಂದು ಟಾಂಗ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular