HomeLatest NewsBIG NEWS: ನಟ ಪ್ರಥಮ್ ಗೆ ಜೀವ ಬೆದರಿಕೆ: ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು...

BIG NEWS: ನಟ ಪ್ರಥಮ್ ಗೆ ಜೀವ ಬೆದರಿಕೆ: ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು ಮಾಡಿದ ಕೋರ್ಟ್

ಬೆಂಗಳೂರು: ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬೇಕರಿ ರಘು ಹಾಗೂ ಯಶಸ್ವಿನಿಗೆ ದೊಡ್ಡಬಳ್ಳಾಪುರ ಜಿಲ್ಲಾ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನಟ ಪ್ರಥಮ್ ಗೆ ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ರೌಡಿಶೀಟರ್ ಗಳಾದ ಬೇಕರಿ ರಘು ಹಾಗೂ ಯಶಸಿನಿ ಇಬ್ಬರನ್ನೂ ಇಂದು ದೊಡ್ದಬಳ್ಳಾಪುರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಆರೋಪಿಗಳು ಬಳಿಕ ದೊಡ್ಡಬಳ್ಳಾಪುರ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯೈಬ್ಬರಿಗೂ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 22ರಂದು ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಬಳಿಯ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಪೂಜೆಗೆಂದು ಹೋಗಿದ್ದ ನಟ ಪ್ರಥಮ್ ಅವರನ್ನು ಅಡ್ಡಗಟ್ಟಿ ಕರೆದೊಯ್ದು, ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪ್ರಥಮ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular