HomeKarnatakaಟಿ.ನರಸೀಪುರ ಇನ್ಸ್ ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕರೆ ನೀಡಿದ ಮಾಜಿ ಸಂಸದ...

ಟಿ.ನರಸೀಪುರ ಇನ್ಸ್ ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕರೆ ನೀಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಮೈಸೂರು: ಮಸೀದಿ ರಸ್ತೆಯಲ್ಲಿ ಗಣೇಶ ಮೆರವಣಿಗೆ ಸಾಗುವಂತಿಲ್ಲ ಎಂಬ ಹೇಳಿಕೆ ನೀಡಿದ್ದ ಟಿ.ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಅಮಾನತಿಗೆ ರಾಜ್ಯ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಟಿ.ನರಸೀಪುರದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಟಿ.ನರಸೀಪುರ ಪೊಲೀಸ್ ಠಾಣೆ ಎದುರು ಬಿಜೆಪಿ ನಾಯಕರು ಕೈಯಲ್ಲಿ ಗಣೇಶ ಮೂರ್ತಿ ಹಿಡಿದು ಪ್ರತಿಭಟನೆ ನಡೆಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರ ಮನವೊಲಿಕೆಗೆ ಯತ್ನ ನಡೆಸಿದರು. ಪ್ರತಿಭಟನೆ ಹಿಂಪಡೆಯುವಂತೆ ಪೊಲೀಸ್ ಅಧಿಕಾರಿಗಳು ಬಿಜೆಪಿ ನಾಯಕರ ಜೊತೆ ಸಂಧಾನ ಸಭೆ ನಡೆಸಿದರು. ಆದರೆ ಸಭೆ ವಿಫಲವಗಿದ್ದು, ಬಿಜೆಪಿ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ಸ್ ಪೆಕ್ಟರ್ ಧನಂಜಯ್ ಅಮಾನತು ಆಗುವವರೆಗೂ ನಾವು ಹೋರಾಟ ಕೈಬಿಡುವುದಿಲ್ಲ. ಇನ್ಸ್ ಪೆಕ್ಟರ್ ಅಮಾನತುಗೊಳಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ. ಬಂಧಿಸುವುದಾದರೆ ನಮ್ಮ ಕೈಯಲ್ಲಿರುವ ಗಣೇಶ ಮೂರ್ತಿ ಸಮೇತ ಬಂಧಿಸುವಂತೆ ಕಿಡಿಕಾರಿದ್ದಾರೆ.

ಈ ವೇಳೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಗಣೇಶ ಮೂರ್ತಿ ಮೆರವಣಿಗೆ ಲಿಂಕ್ ರೋಡ್ ನಲ್ಲಿ ನಡೆಸುವಂತಿಲ್ಲ ಎಂದು ಅಮಾಯಕ ಹಿಂದೂ ಯುವಕರಿಗೆ ಇನ್ಸ್ ಪೆಕ್ಟರ್ ಕಂಡೀಷನ್ ಹಾಕುತ್ತಿದ್ದಾರೆ. ಟಿ.ನರಸೀಪುರದಲ್ಲಿ ಹಲವು ಅಕ್ರಮಗಳು ಅವ್ಯಾಹತವಾಗಿ ನಡೆಯುತ್ತಿವೆ. ಅವುಗಳಿಗೆ ಕಾರಣ ಇನ್ಸ್ ಪೆಕ್ಟರ್ ಧನಂಜಯ್, ಇಸ್ಪೀಟ್ ದಂಧೆ ನಡೆಯುತ್ತಿದೆ. ದಂಧೆಯಲ್ಲಿ ಧನಂಜಯ್ ನೇರವಾಗಿ ಭಾಗಿಯಾಗಿದ್ದಾರೆ. ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣಹಾಕದೇ ಇನ್ಸ್ ಪೆಕ್ಟರ್ ಗಣೇಶ ಮೂರ್ತಿ ಮೆರವಣಿಗೆ ಮೇಲೆ ನಿಯಂತ್ರಣ ಸಾಧಿಸಲು ಹೊರಟಿದ್ದಾರೆ. ಇನ್ಸ್ ಪೆಕ್ಟರ್ ಅವರ ಈ ನಡೆ ಸಹಿಸಲು ಸಾಧ್ಯವಿಲ್ಲ. ತಕ್ಷಣ ಅವರನ್ನು ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಅಹೋರಾತ್ರಿ ಠಾಣೆಯ ಮುಂದೆ ಬಿಜೆಪಿ ಧರಣಿ ನಡೆಸಲಿದೆ ಎಂದು ಹೇಳಿದರು.

ಇನ್ಸ್ ಪೆಕ್ಟರ್ ಅಮಾನತು ಆಗುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಬಂಧನವಾದರೂ ಹೆದರಲ್ಲ. ಇದೇ ಜಾಗದಲ್ಲಿ ಕುಳಿತು ಧರಣಿ ಮುಂದುವರೆಸುತ್ತೇವೆ ಎಂದು ಗುಡುಗಿದ್ದಾರೆ.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್ ಒಡೆಯರ್,ಬಿಜೆಪಿ ಸಹಾಸಕರು, ಮೈಸೂರು ಭಾಗದ ಬಿಜೆಪಿ ನಾಯಕರು, ಹಾಗೂ ಕಾರ್ಯಕರ್ತರು ಭಾಗವಿಸಿದ್ದಾರೆ.

ಟಿ. ನರಸೀಪುರದಲ್ಲಿ ಭುಗಿಲೆದ್ದ ಪ್ರತಿಭಟನೆ: ಬಿಗುವಿನ ವಾತಾವರಣ ನಿರ್ಮಾಣ

ಮೈಸೂರು ಜಿಲ್ಲೆಯ ಟಿ.ನರಸೀಪುರ ಇನ್ಸ್ ಪೆಕ್ಟರ್ ಧನಂಜಯ್ ಗಣೇಶೋತ್ಸವ ಆಚರಣೆ ಸಮಿತಿ ಯುವಕರನ್ನು ಕರೆದು ಧಮ್ಕಿ ಹಾರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಮಾಜಿ ಸಂಸದ ಪ್ರತಾಪ್ ಸಿಂಹ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದರೆ ಮತ್ತೊಂದೆಡೆ ಪ್ರತಾಪ್ ಸಿಂಹ ಪರ ಬಿಜೆಪಿಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಎರಡು ಪ್ರತಿಭಟನೆ ಬೆನ್ನಲ್ಲೇ ಟಿ.ನರಸಿಪುರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಸಭೆ ನಡೆಸಿದ್ದ ಇನ್ಸ್ ಪೆಕ್ಟರ್ ಧನಂಜಯ್ ಗಣೇಶ ಮಂಡಳಿ ಯುವಕರನ್ನು ಠಾಣೆಗೆ ಕರೆಸಿ ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡುವುದು, ಗಲಾಟೆ ಮಾಡುವುದು ಮಾಡಿದರೆ ಗ್ರಹಚಾರ ಬಿಡಿಸುತ್ತೇನೆ. ಯಾವ ಕಾರಣಕ್ಕೂ ಮಸೀದಿ ರಸ್ತೆಯಲ್ಲಿ ಮೆರವಣೊಗೆ ಮಾಡುವಂತಿಲ್ಲ. ನಾವು ಸೂಚಿಸಿದ ಮಾರ್ಗದಲ್ಲೇ ಸಾಗಬೇಕು ಎಂದು ಎಚ್ಚರಿಕೆ ನೀಡಿದ್ದರು.

ಮಸೀದಿ ಬಳಿ ಮೆರವಣಿಗೆ ಹೋಗಬಾರದು, ಅಲ್ಲಿ ಪಟಾಕಿ ಸಿಡಿಸಿ, ಕುಣಿದು ಘೋಷಣೆ ಕೂಗುವಂತದ್ದು ಆಗಬಾರದು. ಪೊಲೀಸರು ಯಾವ ಮಾರ್ಗದಲ್ಲಿ ಹೋಗಬೇಕೆಂದು ಸೂಚಿಸುತ್ತಾರೋ ಅದೇ ಮಾರ್ಗದಲ್ಲಿ ಮೆರವಣಿಗೆ ಸಾಗಬೇಕು. ನಮ್ಮ ಆಚರಣೆ ನೋಡಿ ಬೇರೆಯವರು ಗೌರವ ಕೊಡಬೇಕು ಹೊರತು ಗಲಾಟೆಗಳಾಗಬಾರದು. ನಮ್ಮ ಧರ್ಮ ನಮಗೆ ಹೆಚ್ಚು, ಅವರ ಧರ್ಮ ಅವರಿಗೆ ಹೆಚ್ಚು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಘಟನೆ ನಡೆದರೆ ಮಾತನಾಡಲ್ಲ, ಮಾಡಿ ತೋರಿಸುತ್ತೇವೆ. ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದುಇದ್ದರು.

ಇನ್ಸ್‌ಪೆಕ್ಟರ್ ಧನಂಜಯ್‌ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇನ್ಸ್ ಪೆಕ್ಟರ್ ಅಮಾಯಕ ಯುವಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಹಬ್ಬ ಆಚರಿಸಲು ನಮಗೆ ಪೊಲೀಸರು ಧಮ್ಕಿ ಹಾಕುವಂತಹ ಸ್ಥಿತಿ ರಾಜ್ಯದಲ್ಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದರು.

ಅಸಹಾಯಕರ ಮೇಲೆ ಪೌರುಷ ತೋರಿಸುವ ಬದಲು, ನನ್ನೊಂದಿಗೆ ಪೌರುಷ ತೋರಿಸಿ ಎಂದು ನೇರವಾಗಿ ಇನ್ಸ್ ಪೆಕ್ಟರ್ ಗೆ ಪ್ರತಾಪ್ ಸಿಂಹ ಸವಾಲು ಹಾಕಿದ್ದರು. ಇನ್ನೊಂದು ಸಾರಿ ಅಂತಹ ಮಾತು ನಿಮ್ಮ ಬಾಯಿಂದ ಬಂದರೆ, ನಿಮ್ಮ ಠಾಣೆಗೆ ಬಂದು ನುಗ್ಗುತ್ತೇನೆ ಎಂದು ಎಚ್ಚರಿಸಿದ್ದರು.

ಅಸಹಾಯಕ ಯುವಕರ ಮೇಲೆ ಪೌರುಷ ತೋರಿಸುವ ಬದಲು, ನಾನು ಬಂದಾಗ ನನ್ನೊಂದಿಗೆ ಪೌರುಷ ತೋರಿಸಿ . ಗಣೇಶೋತ್ಸವದ ಸಂದರ್ಭದಲ್ಲಿ ಮಾತ್ರ ಮಸೀದಿಗಳ ಮುಂದೆ ಪೊಲೀಸ್ ಭದ್ರತೆ ಇರುತ್ತದೆ, ಆದರೆ ಮೊಹರಂ ಅಥವಾ ಈದ್ ಮೆರವಣಿಗೆಗಳ ಸಂದರ್ಭದಲ್ಲಿ ದೇವಸ್ಥಾನಗಳ ಮುಂದೆ ಇದೇ ರೀತಿಯ ಭದ್ರತೆ ಯಾಕೆ ಇರುವುದಿಲ್ಲ? ಈ ನಿರ್ಬಂಧಗಳು ಏಕಪಕ್ಷೀಯವಾಗಿವೆ. ಇನ್ಸ್ ಪೆಕ್ಟರ್ ಧನಂಜಯ್ ಅವರ ಹೇಳಿಕೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿ ನಾಯಕರು ಕೂಡ ಇನ್ಸ್ ಪೆಕ್ಟರ್ ಧನಂಜಯ್ ಹೇಳಿಕೆಗೆ ಕೆಂಡ ಕಾರಿದ್ದರು. ನಮ್ಮ ಹಬ್ಬಕ್ಕೆ ಕಂಡಿಷನ್ ಹಾಕುವ ಪೊಲೀಸ್ ಅಧಿಕಾರಿಗಳು ಮೊಹರಮ್ ಮೆರವಣಿಗೆ ವೇಳೆ ಯಾಕೆ ಹಾಕುವುದಿಲ್ಲ? ಎಂದು ಪ್ರಶ್ನಿಸಿದ್ದರು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಟಿ.ನರಸೀಪುರದಲ್ಲಿ ಒಂದೆಡೆ ದಲಿತ ಸಂಘಟನೆಗಳು ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕುವ ಮೂಲಕ ಪೊಲೀಸರ ಧ್ವನಿ ಹತ್ತಿಕ್ಕುವ ಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ ಪ್ರತಾಪ್ ಸಿಂಹ ಹೇಳಿಕೆಗೆ ಬೆಂಬಲ ಸೂಚಿಸಿ, ಇನ್ಸ್ ಪೆಕ್ಟರ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಾಪ್ ಸಿಂಹ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ವಾಗಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular