HomeKarnatakaಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಸಂಘದ ವತಿಯಿಂದ 2024ನೇ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 90 ರಷ್ಟು ಮತ್ತು ಶೇಕಡ 90ಕ್ಕಿಂತ ಹೆಚ್ಚು ಅಂಕಗಳಿಸಿದ ರಾಜ್ಯ ಸರ್ಕಾರದ ಅಧಿಕಾರಿಗಳು, ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಅರ್ಜಿ ಸಲ್ಲಿಸಲು ಮೇ 30ರವರೆಗೆ ಅವಕಾಶ ನೀಡಲಾಗಿತ್ತು. ಕೆಲವು ಅಧಿಕಾರಿಗಳು, ನೌಕರರು ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲು ಕೋರಿದ್ದರ ಮೇರೆಗೆ ಜೂನ್ 2 ರವರೆಗೆ ದಿನಾಂಕ ವಿಸ್ತರಿಸಲಾಗಿದೆ. ಮತ್ತೊಮ್ಮೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://forms.gle/RHh5ktyFq5xDui2A ಆನ್ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. ಮೊಬೈಲ್ ಸಂಖ್ಯೆ 99021 35813ಕ್ಕೆ ವಾಟ್ಸಾಪ್ ಮೂಲಕ ಪ್ರತಿಭಾ ಪುರಸ್ಕಾರ ಎಂಬ ಸಂದೇಶ ಕಳುಹಿಸಿ ಲಿಂಕ್ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular