HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಪ್ರತಿಭಾ ಶೋಧ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಪ್ರತಿಭಾ ಶೋಧ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ

CCRT ನವದೆಹಲಿ ವತಿಯಿಂದ ಪ್ರತಿಭಾ ಶೋಧ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಸಾಂಸ್ಕೃತಿಕ(ಸಂಗೀತ, ನೃತ್ಯ, ನಾಟಕ) ಕ್ಷೇತ್ರಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 2024-25 ನೇ ಸಾಲಿಗೆ CCRT ನವದೆಹಲಿ ವತಿಯಿಂದ ನೃತ್ಯ, ಡ್ರಾಮಾ, ಚಿತ್ರಕಲೆ, ವಾಸ್ತುಶಿಲ್ಪ, ಕರಕುಶಲ, ಸೃಜನಾತ್ಮಕ ಬರವಣಿಗೆ, ಸಾಹಿತ್ಯ ಕಲೆಯಂಥಹ ಹಲವು ವಿಭಾಗಗಳಲ್ಲಿ ಸಾಧನೆಗೈದಿರುವ 10 ರಿಂದ 14 ವಯೋಮಾನದ ಪ್ರತಿಭಾವಂತ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಿದ್ದಾರೆ. ವಿದ್ಯಾರ್ಥಿ ವೇತನದ ಅರ್ಜಿಯು www.ccrtindia.gov.in ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ.

ತಿಳಿಸಿರುವ ಸೂಚನೆ ಮತ್ತು ಷರತ್ತುಗಳನ್ವಯ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಸದರಿ ವಿಭಾಗಗಳಲ್ಲಿ ಸಾಧನೆಗೈದಿರುವ ಪ್ರತಿಭಾವಂತ ಮಕ್ಕಳನ್ನು ನೋಂದಾಯಿಸಿಕೊಳ್ಳಲು ಸೂಚಿಸಿ ಅಗತ್ಯ ಸಹಕಾರ ನೀಡುವುದು ಹಾಗೂ ನೋಂದಾಯಿತ ವಿದ್ಯಾರ್ಥಿಗಳ ಪಟ್ಟಿಯನ್ನು ನೇರವಾಗಿ [email protected] ಇ-ಮೇಲ್ ವಿಳಾಸಕ್ಕೆ ದಿನಾಂಕ: 31-08- 2024 ರ ಒಳಗಾಗಿ ತಪ್ಪದೆ ಸಲ್ಲಿಸಲು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular