BREAKING NEWS : ‘ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣ : ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ‘NIA’ ದಾಳಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ದಾಳಿ ನಡೆಸಿದ್ದು, ನಿಷೇಧಿತ ಪಿಎಫ್ ಸಂಘಟನೆ ಕಾರ್ಯಕರ್ತರ ಮನೆ ಮೇಲೂ ದಾಳಿ ನಡೆದಿದೆ. ಒಟ್ಟು 6 ಕಡೆ ಏಕಕಾಲಕ್ಕೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಚಿಕನ್ ಅಂಗಡಿ ನಡೆಸುತ್ತಿದ್ದ 31 ವರ್ಷದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read