HomeKarnatakaBREAKING : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; NIA ಯಿಂದ ಮೋಸ್ಟ್ ವಾಂಟೆಡ್ ಆರೋಪಿ...

BREAKING : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ; NIA ಯಿಂದ ಮೋಸ್ಟ್ ವಾಂಟೆಡ್ ಆರೋಪಿ ‘ಉಮರ್ ಫಾರೂಕ್’ ಅರೆಸ್ಟ್.!

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮೋಸ್ಟ್ ವಾಂಟೆಡ್ ಆರೋಪಿಯಾಗಿದ್ದ ಉಮರ್ ಫಾರೂಕ್‌ನನ್ನು ಬಂಧಿಸಿದೆ. ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎನ್‌ಐಎ ವಿಶೇಷ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಮಹತ್ವದ ಯಶಸ್ಸು ದೊರೆತಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದು, ಎನ್‌ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಮರ್ ಫಾರೂಕ್ನನ್ನು ಬಂಧಿಸಲಾಗಿದೆ.

ಕೇರಳದ ಕೊಚ್ಚಿಯಲ್ಲಿ ಎನ್ ಐ ಎ  ಅಧಿಕಾರಿಗಳು ಆರೋಪಿ ಉಮರ್ ಫಾರೂಕ್‌ನನ್ನು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಇದುವರೆಗೆ 25 ಮಂದಿಯನ್ನು ಬಂಧಿಸಲಾಗಿದೆ. ಉಮರ್ ಫಾರೂಕ್ ಬಂಧನಕ್ಕೆ NIA 4 ಲಕ್ಷ ಬಹುಮಾನ ಕೂಡ ಘೋಷಿಸಿತ್ತು. ಇನ್ನೂ. ಇಬ್ಬರು ಆರೋಪಿಗಳ ಬಂಧನಕ್ಕೆ ಎನ್ ಐ ಎ ಶೋಧ ನಡೆಸಿದೆ. ಉಮರ್ ಫಾರೂಕ್ ಹಲವು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಎನ್‌ಐಎ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ಮಾಹಿತಿ ಪ್ರಕಾರ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಚು, ಆರೋಪಿಗಳಿಗೆ ಆಶ್ರಯ ನೀಡಿರುವುದು ಹಾಗೂ ಇತರ ಪ್ರಮುಖ ಅಂಶಗಳ ಕುರಿತು ಉಮರ್ ಫಾರೂಕ್‌ನಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆತನ ವಿಚಾರಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಹತ್ವದ ಮಾಹಿತಿ ಹೊರಬರುವ ಸಾಧ್ಯತೆ ಇದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಈ ಬಂಧನದೊಂದಿಗೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ಹೊಸ ವೇಗ ಸಿಕ್ಕಿದ್ದು, ಉಳಿದ ಆರೋಪಿಗಳ ವಿರುದ್ಧವೂ ಎನ್‌ಐಎ ಕಾರ್ಯಾಚರಣೆ ಮುಂದುವರಿಸಿದೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ಬಹಿರಂಗವಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular