BIGG NEWS : ‘ಪ್ರವೀಣ್ ನೆಟ್ಟಾರು’ ಕೊಲೆ ಪ್ರಕರಣ : ಐವರು ಆರೋಪಿಗಳ ಸುಳಿವು ನೀಡಿದವರಿಗೆ ಸೂಕ್ತ ಬಹುಮಾನ ಘೋಷಿಸಿದ ‘NIA’

ಬೆಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಐವರು ಆರೋಪಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಸ್ತುತ ತಲೆಮರೆಸಿಕೊಂಡಿರುವ ಐವರು ಆರೋಪಿಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ಎನ್ಐಎ ಸಾರ್ವಜನಿಕರನ್ನು ಕೇಳಿದೆ. ಆರೋಪಿಗಳ ಬಗ್ಗೆ ಸುಳಿವು, ಮಾಹಿತಿ ನೀಡಿದರೆ ಸೂಕ್ತ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ವಾಂಟೆಡ್ ವ್ಯಕ್ತಿಗಳ ಹೆಸರುಗಳು ಮತ್ತು ವಿಳಾಸಗಳೊಂದಿಗೆ ಹೆಸರುಗಳನ್ನು ಎನ್ಐಎ ಬಿಡುಗಡೆ ಮಾಡಿದೆ.ಮುಹಮ್ಮದ್ ಮುಸ್ತಫಾ, ಮಸೂದ್ ಅಗ್ನಾಡಿ, ಮೊಹಮ್ಮದ್ ಶರೀಫ್, ಉಮ್ಮರ್ ಆರ್ ಅಲಿಯಾಸ್ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಅಲಿಯಾಸ್ ಅಬೂಬಕ್ಕರ್ ಸಿದ್ದಿಕಿ ಬಗ್ಗೆ ಎನ್ಐಎ ಮಾಹಿತಿ ಕೋರಿದೆ. ವಾಂಟೆಡ್ ಪುರುಷರೆಲ್ಲರೂ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

https://twitter.com/NIA_India/status/1735628445890261442

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read