BREAKING NEWS: ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ

ನವದೆಹಲಿ: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರನ್ನು ನೇಮಕ ಮಾಡಲಾಗಿದೆ.

ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮೇ 25 ರಂದು ಕೊನೆಗೊಳ್ಳಲಿದೆ. ಮುಂದಿನ ನಿರ್ದೇಶಕರ ಆಯ್ಕೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ ತೀರ್ಮಾನ ಕೈಗೊಂಡಿತ್ತು.

ಡಿಜಿಪಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಂದಿನ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಪರಿಶೀಲನೆ ನಡೆಸಿ ತೀರ್ಮಾನಿಸಲಾಗಿತ್ತು.

1986ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷ ಇದೆ. ಇದೀಗ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ಹೊಸ ನಿರ್ದೇಶಕರಾಗಿ ಎರಡು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read