ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಮಹಾಕುಂಭ ಮೇಳಕ್ಕೆ ಟೆಂಟ್ ಸಾಮಗ್ರಿಗಳನ್ನು ಪೂರೈಸಿದ್ದ ಕಂಪನಿಯೊಂದರ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಗೋಡೌನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ೬ ಅಗ್ನಿಶಾಮಕ ನೀರಿನ ಟ್ಯಾಂಕರ್ ಗಳು ಆಗಮಿಸಿದ್ದು, ಸಿಬಂದಿಗಳು ಬೆಂಕಿ ನಮ್ದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ. ಗೋಡೌನ್ ನಲ್ಲಿ ಟೆಂತ್ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು.