HomeLatest Newsಕುಂಭಮೇಳಕ್ಕೆ ಟೆಂಟ್ ಸಾಮಗ್ರಿ ಪೂರೈಸುತ್ತಿದ್ದ ಕಂಪನಿ ಗೋಡೌನ್ ನಲ್ಲಿ ಬೆಂಕಿ ಅವಘಡ

ಕುಂಭಮೇಳಕ್ಕೆ ಟೆಂಟ್ ಸಾಮಗ್ರಿ ಪೂರೈಸುತ್ತಿದ್ದ ಕಂಪನಿ ಗೋಡೌನ್ ನಲ್ಲಿ ಬೆಂಕಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಮಹಾಕುಂಭ ಮೇಳಕ್ಕೆ ಟೆಂಟ್ ಸಾಮಗ್ರಿಗಳನ್ನು ಪೂರೈಸಿದ್ದ ಕಂಪನಿಯೊಂದರ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಗೋಡೌನ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ೬ ಅಗ್ನಿಶಾಮಕ ನೀರಿನ ಟ್ಯಾಂಕರ್ ಗಳು ಆಗಮಿಸಿದ್ದು, ಸಿಬಂದಿಗಳು ಬೆಂಕಿ ನಮ್ದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ. ಗೋಡೌನ್ ನಲ್ಲಿ ಟೆಂತ್ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular