Prayagraj Shocker: ಸ್ನೇಹಿತ ಸೇರಿದಂತೆ ಮೂವರಿಂದ ಲೈಂಗಿಕ ಕಿರುಕುಳ; ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ – ಕೊಲೆ ಪ್ರಕರಣದ ಬಳಿಕ ಇಂತಹ ಮತ್ತಷ್ಟು ಸುದ್ದಿಗಳು ಪದೇ ಪದೇ ಬೆಳಕಿಗೆ ಬರುತ್ತಿದ್ದು, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ತನ್ನ ಸ್ನೇಹಿತ ಸೇರಿದಂತೆ ಮೂವರು ಲೈಂಗಿಕ ಕಿರುಕುಳ ನೀಡಲು ಆರಂಭಿಸಿದಾಗ ಅವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ದೀಪಾಲಿ ತ್ರಿಪಾಠಿ ಸಾವನ್ನಪ್ಪಿದ ಯುವತಿಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆಯುತ್ತಿದ್ದ ಈಕೆ, ಮಂಗಳವಾರದಂದು ಪುಸ್ತಕ ತರಲೆಂದು ಹೊರ ಹೋಗಿದ್ದಳು ಎಂದು ಆಕೆಯ ತಂದೆ ಭೂಪೇಂದ್ರ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸೌರಭ್ ಸಿಂಗ್ ಮತ್ತು ಆತನ ಮೂವರ ಸ್ನೇಹಿತರು ನನ್ನ ಮಗಳ ಮೊಬೈಲ್ ಫೋನ್ ಕಿತ್ತುಕೊಂಡು ಕಿರುಕುಳ ನೀಡಿದ್ದಾರೆ. ಅವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆಕೆ ಕಟ್ಟಡದಿಂದ ಹಾರಿದ್ದಳು ಎಂದು ಆರೋಪಿಸಿದ್ದಾರೆ.

ಇನ್ನು ಪ್ರಕರಣದ ಕುರಿತಂತೆ ಮಾತನಾಡಿರುವ ಕಲೋನ್ ಗಂಜ್ ಸಹಾಯಕ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಯಾದವ್, ಪ್ರಾಥಮಿಕ ತನಿಖೆ ಸಂದರ್ಭದಲ್ಲಿ ದೀಪಾಲಿ ಹಾಗೂ ಸೌರಭ್ ಸಿಂಗ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕೆಲ ದಿನಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿದ್ದು, ಈ ವಿಷಯ ಮಾತನಾಡುವಾಗಲೇ ಇಬ್ಬರ ನಡುವೆ ಜಗಳ ನಡೆದು ದುರಂತ ಸಂಭವಿಸಿದೆ ಎಂದಿದ್ದಾರೆ. ಈಗಾಗಲೇ ಆರೋಪಿ ಸೌರಭ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read