BREAKING: ಮಹಾ ಕುಂಭಮೇಳದಲ್ಲಿ ಮತ್ತೆ ಅವಘಡ: ಕಾಲ್ತುಳಿತದಲ್ಲಿ 50 ಜನರಿಗೆ ಗಾಯ: ಯೋಗಿಗೆ ಕರೆ ಮಾಡಿ ಮಾಹಿತಿ ಪಡೆದ ಮೋದಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಕಾಲ್ತುಳಿದಲ್ಲಿ 50 ಜನ ಗಾಯಗೊಂಡಿದ್ದಾರೆ.

ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಮೌನಿ ಅಮಾವಾಸ್ಯೆಯ ಅಮೃತ ಪುಣ್ಯಸ್ನಾನಕ್ಕೆ ಕೋಟ್ಯಂತರ ಭಕ್ತರು ಪ್ರಯಾಗ್ ರಾಜ್ ಗೆ ಆಗಮಿಸಿದ್ದಾರೆ.

ಈ ವೇಳೆ ಕಾಲ್ತುಳಿತ ಉಂಟಾಗಿ 50 ಜನ ಗಾಯಗೊಂಡಿದ್ದಾರೆ. ಮೊದಲೇ ಮುನ್ನೆಚ್ಚರಿಕೆ ಕೈಗೊಂಡಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಅಸ್ವಸ್ಥರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇನ್ನು ಮಹಾ ಕುಂಭಮೇಳದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಮಾಹಿತಿ ಪಡೆದಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ ಬೆಳವಣಿಗೆಗಳನ್ನು ಪರಿಶೀಲಿಸಿದ್ದು, ತಕ್ಷಣದ ಕ್ರಮಗಳಿಗೆ ಸೂಚಿಸಿದ್ದಾರೆ.

ಈ ಹಿಂದೆ ಮಹಾ ಕುಂಭಮೇಳದಲ್ಲಿ ಟೆಂಟ್ ಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಆಕಸ್ಮಿಕ ಅಗ್ನಿ ಅವಘಡದಿಂದ ಕಾರ್ ಗಳು ಸುಟ್ಟು ಕರಕಲಾಗಿದ್ದವು. ಇದೀಗ ಕಾಲ್ತುಳಿತ ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read