HomeLatest News‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ' ನಿಯಾಮಾವಳಿ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ; ಅಮಿತ್ ಶಾ ಮಧ್ಯಪ್ರವೇಶಕ್ಕೆ...

‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ’ ನಿಯಾಮಾವಳಿ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ; ಅಮಿತ್ ಶಾ ಮಧ್ಯಪ್ರವೇಶಕ್ಕೆ ಒತ್ತಾಯ

ಬೆಂಗಳೂರು: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (ಪಿಆರ್ ಸಿ) 2026’ ನಿಯಮಾವಳಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ಈ ವಿವಾದಾತ್ಮಕ ನಿರ್ಧಾರದ ವಿರುದ್ಧ ಕೂಡಲೇ ಮಧ್ಯಪ್ರವೇಶಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸುತ್ತಿದೆ. ಇದು ಭಾರತದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ.ಭಾರತೀಯ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೂ ‘ಏಕ ಪೌರತ್ವ’ವನ್ನು ಕಲ್ಪಿಸಿದೆ. ಹೀಗಿರುವಾಗ ರಾಜ್ಯ ಸರ್ಕಾರ ಪ್ರತ್ಯೇಕ ವಸತಿ ಪ್ರಮಾಣಪತ್ರದ ಮೂಲಕ ವರ್ಗೀಕರಣ ಮಾಡಲು ಹೊರಟಿರುವುದು ತಪ್ಪು. ಸಂವಿಧಾನದ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ 14ನೇ ವಿಧಿಯನ್ನು ಈ ನಿಯಮವು ನೇರವಾಗಿ ಉಲ್ಲಂಘಿಸುತ್ತದೆ.ಈ ಆದೇಶವು ದೇಶದ ಆಂತರಿಕ ಭದ್ರತೆಗೆ ದೊಡ್ಡ ಅಪಾಯವನ್ನು ಉಂಟುಮಾಡಲಿದೆ ಎಂದು ಶೋಭಾ ಕರಂದ್ಲಾಜೆ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಮಾಣಪತ್ರ ನೀಡಲು ಕೇವಲ ಸ್ಥಳೀಯ ಕಂದಾಯ ಅಧಿಕಾರಿಗಳ ವರದಿ ಸಾಕು ಎಂಬ ನಿಯಮವಿದೆ. ಆದರೆ, ಭಾರತೀಯ ಪೌರತ್ವವನ್ನು ಕೇಂದ್ರ ಏಜೆನ್ಸಿಗಳ ಮೂಲಕ ಪರಿಶೀಲಿಸುವ ಯಾವುದೇ ದೃಢವಾದ ವ್ಯವಸ್ಥೆ ಇಲ್ಲಿಲ್ಲ.?ಕಾನೂನುಬಾಹಿರ ಕ್ರಮ: ರಾಜ್ಯ ಸರ್ಕಾರದ ಈ ಅಧಿಸೂಚನೆಯು ಕಾನೂನುಬಾಹಿರವಾಗಿದೆ ಮತ್ತು ಸಂವಿಧಾನದ ಚೌಕಟ್ಟನ್ನು ಮೀರಿ ರೂಪಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇವಲ ಸ್ಥಳೀಯ ದಾಖಲೆಗಳ ಆಧಾರದ ಮೇಲೆ ನೀಡುವ ಈ ಪ್ರಮಾಣಪತ್ರವು ದುರುಪಯೋಗವಾಗುವ ಸಾಧ್ಯತೆಗಳನ್ನು ತೋರಿಸಿದ್ದಾರೆ. ಪೌರತ್ವದ ವಿಷಯ ಕೇಂದ್ರದ ವ್ಯಾಪ್ತಿಗೆ ಒಳಪಡುವಾಗ, ರಾಜ್ಯ ಸರ್ಕಾರವು ಇಂತಹ ನಿರ್ಧಾರ ತೆಗೆದುಕೊಂಡಿರುವುದು ಫೆಡರಲ್ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಈ ವಿಷಯದ ಗಂಭೀರತೆಯನ್ನು ಪರಿಗಣಿಸಿ, ಕೂಡಲೇ ರಾಜ್ಯದ ಈ ನಿಯಮಾವಳಿಗಳನ್ನು ಕೇಂದ್ರ ಸರ್ಕಾರ ತುರ್ತು ಪರಿಶೀಲನೆಗೆ ಒಳಪಡಿಸಬೇಕೆಂದು ಸಚಿವೆ ಆಗ್ರಹಿಸಿದ್ದಾರೆ.

ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಹೊರಹಾಕುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಪ್ರಯತ್ನಗಳಿಗೆ ರಾಜ್ಯ ಸರ್ಕಾರದ ಈ ಆದೇಶವು ದೊಡ್ಡ ಹಿನ್ನಡೆಯನ್ನುಂಟು ಮಾಡಲಿದೆ. ಈ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ತಕ್ಷಣವೇ ಪರಿಶೀಲಿಸಬೇಕೆಂದು ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವಾಲಯವನ್ನು ಆಗ್ರಹಿಸಿದ್ದಾರೆ.

ಅನುಷ್ಠಾನಕ್ಕೆ ತಡೆಗೆ ಒತ್ತಾಯ

ಈ ವಿಷಯದ ಸಂಪೂರ್ಣ ಪರಿಶೀಲನೆ ಪೂರ್ಣಗೊಳ್ಳುವವರೆಗೆ, ಈ ಪ್ರಮಾಣಪತ್ರ ನೀಡುವ ಪ್ರಕ್ರಿಯೆಗೆ ತಕ್ಷಣವೇ ತಡೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.ಯಾವ ಕಾನೂನುಬದ್ಧ ಅಧಿಕಾರದ ಅಡಿಯಲ್ಲಿ ರಾಜ್ಯ ಸರ್ಕಾರ ಈ ನಿಯಮವನ್ನು ಜಾರಿಗೆ ತಂದಿದೆ ಎಂಬ ಬಗ್ಗೆ ರಾಜ್ಯ ಸರ್ಕಾರದಿಂದ ವರದಿಯನ್ನು ಕೇಳಬೇಕು. ಕೇಂದ್ರ ಏಜೆನ್ಸಿಗಳಿಂದ ಪೌರತ್ವ ಪರಿಶೀಲನೆ ಆಗದ ಹೊರತು, ರಾಜ್ಯ ಸರ್ಕಾರ ಯಾವುದೇ ಪ್ರಮಾಣಪತ್ರವನ್ನು ವಿತರಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಹಕ್ಕಿನ ವ್ಯಾಪ್ತಿಯ ಕುರಿತು ಹೊಸ ಚರ್ಚೆಗೆ ನಾಂದಿ ಹಾಡಿದ್ದು, ಸಚಿವರ ಪತ್ರಕ್ಕೆ ಕೇಂದ್ರ ಗೃಹ ಸಚಿವಾಲಯ ಯಾವ ರೀತಿ ಸ್ಪಂದಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular