HomeKarnatakaಬಜೆಟ್ ಪೂರ್ವ ತಯಾರಿ: ಸೋಮವಾರದಿಂದ ಸಿಎಂ ಸಿದ್ದರಾಮಯ್ಯ ಫುಲ್ ಬ್ಯುಸಿ

ಬಜೆಟ್ ಪೂರ್ವ ತಯಾರಿ: ಸೋಮವಾರದಿಂದ ಸಿಎಂ ಸಿದ್ದರಾಮಯ್ಯ ಫುಲ್ ಬ್ಯುಸಿ

ಹಣಕಾಸು ಸಚಿವರೂ ಆಗಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ 2026ರ  ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಫೆಬ್ರವರಿ 2 ರಿಂದ ಅವರು ವಿವಿಧ ಇಲಾಖೆಗಳ ಸಭೆಗಳನ್ನು ನಡೆಸಲಿದ್ದಾರೆ. ಮಾರ್ಚ್‌ನಲ್ಲಿ ಬಜೆಟ್ ಅಧಿವೇಶನ ನಡೆಯಲಿದ್ದು, ಬಜೆಟ್ ಮಂಡನೆ ದಿನಾಂಕ ಇನ್ನೂ ಸಹ ನಿಗದಿಯಾಗಿಲ್ಲ.

ಬೆಂಗಳೂರಿನ ಶಕ್ತಿ ಭವನದಲ್ಲಿ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಇಲಾಖಾವಾರು ನಡೆಯಲಿದೆ. ಫೆಬ್ರವರಿ 2ರ ಸೋಮವಾರದಿಂದ ಫೆಬ್ರವರಿ 6ರ ಶುಕ್ರವಾರದ ತನಕ ಸರಣಿ ಸಭೆಗಳು ನಡೆಯಲಿದ್ದು, ಯಾವ ಇಲಾಖೆ ಸಭೆ ಯಾವಾಗ? ಎಂದು ಈಗಾಗಲೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ಸಿದ್ದರಾಮಯ್ಯ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿ ಬಜೆಟ್ ಪೂರ್ವ ತಯಾರಿ ಕುರಿತು ಚರ್ಚಿಸಿದ್ದಾರೆ. ಈಗ ಇಲಾಖಾವಾರು ಬೇಡಿಕೆ ಕುರಿತು ಸಭೆಗಳನ್ನು ನಿಗದಿ ಮಾಡಲಾಗಿದೆ. ಆದ್ದರಿಂದ ಸೋಮವಾರದಿಂದ ಸಿದ್ದರಾಮಯ್ಯ ಬೆಂಗಳೂರು ನಗರದಲ್ಲಿಯೇ ಇರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆಯನ್ನು ಈಗಾಗಲೇ ಬರೆದಿದ್ದಾರೆ. ದೇವರಾಜ ಅರಸು ಅವರ ದಾಖಲೆಯನ್ನೂ ಮುರಿದಿದ್ದಾರೆ. ಈಗ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಬರೆಯಲಿದ್ದಾರೆ.

2026-27ನೇ ಸಾಲಿನ ಬಜೆಟ್ ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 17ನೇ ಬಜೆಟ್ ಆಗಿದೆ. ರಾಜ್ಯದ ಯಾವ ರಾಜಕೀಯ ನಾಯಕರು ಸಹ ಇಷ್ಟು ಬಾರಿ ಬಜೆಟ್ ಮಂಡನೆ ಮಾಡಿಲ್ಲ. ಆದ್ದರಿಂದ ಈಗ ಸಿದ್ದರಾಮಯ್ಯ ಹೊಸ ದಾಖಲೆ ಬರೆಯಲಿದ್ದಾರೆ.

ಸಿದ್ದರಾಮಯ್ಯ ಬಜೆಟ್ ನೋಟ: 1995ರಲ್ಲಿ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಮೊದಲ ಬಜೆಟ್ ಮಂಡಿಸಿದ್ದರು. 2013-2018ರ ತನಕ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿ ಅವರು 5 ವರ್ಷ ಬಜೆಟ್ ಮಂಡಿಸಿದ್ದರು. ಈಗ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದು ಹಣಕಾಸು ಖಾತೆಯೂ ಅವರ ಬಳಿಯೇ ಇದೆ.

 ಸಿದ್ದರಾಮಯ್ಯ ಅವರು 1995 ಮತ್ತು 1996 ರಲ್ಲಿ ದೇವೇಗೌಡರ ಸಂಪುಟದಲ್ಲಿದ್ದಾಗ ಬಜೆಟ್ ಮಂಡಿಸಿದರ. 1997, 1998, 1999ರಲ್ಲಿ ಜೆ.ಎಚ್‌. ಪಟೇಲ್‌ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಬಜೆಟ್‌ ಮಂಡನೆ ಮಾಡಿದರು.

2013ರಲ್ಲಿ ಮುಖ್ಯಮಂತ್ರಿಯಾದ ಬಳಿಕ 2013, 2014, 2015, 2016, 2017 ಮತ್ತು 2018 (ಲೇಖಾನುದಾನ) ಹೀಗೆ ನಿರಂತರವಾಗಿ 6 ಬಾರಿ ಬಜೆಟ್ ಮಂಡನೆ ಮಾಡಿದರು. 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದರು. ಬಳಿಕ 2024-25, 2025-26ನೇ ಸಾಲಿನ ಬಜೆಟ್ ಮಂಡಿಸಿದರು.

ಈಗ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಕರೆದಿದ್ದಾರೆ. ನವೆಂಬರ್ 2025ರಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆರಂಭವಾದಾಗ ಸಿದ್ದರಾಮಯ್ಯ ಅವರು ನಾನೇ ಬಜೆಟ್ ಮಂಡನೆ ಮಾಡುತ್ತೇನೆ ಎಂದು ಹೇಳಿದ್ದರು.

ಬಜೆಟ್ ಪೂರ್ವಭಾವಿ ಸಭೆಗೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳ ಜೊತೆ (5 ಅಧಿಕಾರಿಗಳು ಮೀರದಂತೆ) ಭಾಗವಹಿಸಬೇಕು. ಅವಶ್ಯಕ ಮಾಹಿತಿಯೊಂದಿಗೆ ಸಭೆಯಲ್ಲಿ ಸಚಿವರ ಜೊತೆ ಉಪಸ್ಥಿತರಿರಬೇಕು ಎಂದು ಸೂಚನೆ ಕೊಡಲಾಗಿದೆ.

2026-27ನೇ ಸಾಲಿನ ಬಜೆಟ್‌ ಮೇಲೆ ಅಪಾರವಾದ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಸಾಲು ಸಾಲು ಚುನಾವಣೆಗಳು ಎದುರಾಗುತ್ತಿವೆ. ಬೆಂಗಳೂರು ನಗರದ ಆಡಳಿತ ನೋಡಿಕೊಳ್ಳುವ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆ ನಡೆಯಲಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿದೆ. ಆದ್ದರಿಂದ ಬಜೆಟ್‌ನಲ್ಲಿ ಹಲವು ಘೋಷಣೆ ನಿರೀಕ್ಷೆ ಮಾಡಲಾಗಿದೆ. ಇದರ ಜೊತೆಗೆ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular