HomeLatest Newsರಾಜ್ಯದಲ್ಲಿ ಮೇ 10 ರಿಂದ ಪೂರ್ವ ಮುಂಗಾರು ಮತ್ತಷ್ಟು ಚುರುಕು, ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮೇ 10 ರಿಂದ ಪೂರ್ವ ಮುಂಗಾರು ಮತ್ತಷ್ಟು ಚುರುಕು, ಎಲ್ಲಾ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮೇ 10 ರಿಂದ ಪೂರ್ವ ಮುಂಗಾರು ಇನ್ನಷ್ಟು ಚುರುಕಾಗಲಿದೆ. ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಮೇ 10 ರಿಂದ 13 ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ವಿಜಯನಗರ, ಬೆಳಗಾವಿ, ಬೀದರ್, ಧಾರವಾಡ, ಬಳ್ಳಾರಿ, ಯಾದಗಿರಿ, ಕಲಬುರರಿ, ಹಾವೇರಿ, ರಾಯಚೂರು, ಕೊಪ್ಪಳ, ವಿಜಯಪುರ, ಗದಗದಲ್ಲಿ ಮೇ 10 ರಿಂದ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನೇಕ ಜಿಲ್ಲೆಗಳಲ್ಲಿ ಮಳೆ ಬೀಳುವ ಸಂದರ್ಭದಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮೇ 6ರಿಂದ 9ರವರೆಗೆ ರಾಜ್ಯದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular