ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ʻಪ್ರಿ ವೆಡ್ಡಿಂಗ್ ಶೋಟ್ʼ : ಸೇವೆಯಿಂದ ವೈದ್ಯರು ವಜಾ!

ಬೆಂಗಳೂರು : ಚಿತ್ರದುರ್ಗದ ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ.

ಈ ಕುರಿತು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದು, ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿ ವೆಡ್ಡಿಂಗ್ ಶೋಟ್ ನಡೆಸಿದ ವೈದ್ಯರನ್ನ ಸೇವೆಯಿಂದ ವಜಾಗೊಳಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಿರುವುದು ಜನರ ಆರೋಗ್ಯ ಸೇವೆಗೆ ಹೊರತು ವೈಯಕ್ತಿಕ ಕೆಲಸಗಳಿಗಲ್ಲ. ವೈದ್ಯರಿಂದ ಇಂಥಹ ಅಶಿಸ್ತುಗಳನ್ನ ನಾನು ಸಹಿಸುವುದಿಲ್ಲ ಎಂದಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಗುತ್ತಿಗೆ ನೌಕರರು ಸೇರಿದಂತೆ ವೈದ್ಯರು, ಸಿಬ್ಬಂದಿ ವರ್ಗದವರು ಸರ್ಕಾರಿ ಸೇವಾ ನಿಯಮಾವಳಿಗಳ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ರೀತಿಯ ದುರುಪಯೋಗಳು ಆಗದಂತೆ ಎಚ್ಚರಿಕೆ ವಹಿಸಲು ಸಂಬಂಧಪಟ್ಟ ವೈದ್ಯರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಈಗಾಗಲೇ ಸೂಚಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಒದಗಿಸಿರುವ ಸೌಕರ್ಯಗಳು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಎಂಬುದನ್ನ ಅರಿತು ಕರ್ತವ್ಯ ನಿರ್ವಹಿಸುವತ್ತ ಎಲ್ಲರು ಗಮನಹರಿಸಬೇಕು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read