HomeLatest NewsBREAKING : ಪ್ರೀತ್ಸೆ..ಪ್ರೀತ್ಸೆ ಅಂತ 'ಪಾಗಲ್ ಪ್ರೇಮಿ' ಯಿಂದ ಕಿರುಕುಳ  : ಮೈಸೂರಲ್ಲಿ ಅಪ್ರಾಪ್ತ...

BREAKING : ಪ್ರೀತ್ಸೆ..ಪ್ರೀತ್ಸೆ ಅಂತ ‘ಪಾಗಲ್ ಪ್ರೇಮಿ’ ಯಿಂದ ಕಿರುಕುಳ  : ಮೈಸೂರಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ.!

ಮೈಸೂರು :  ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ  ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದಿದ್ದು, ಇದರಿಂದ  ಮನನೊಂದು ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ನಂಜನೂಡು ನೀಲಕಂಠ ನಗರದ ದಿವ್ಯ (17) ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದನು. ಇದರಿಂದ ಬಾಲಕಿ ತೀವ್ರವಾಗಿ ನೊಂದಿದ್ದಳು.

ಆದಿತ್ಯ ಕಿರುಕುಳ ನೀಡುತ್ತಿರುವ ಬಗ್ಗೆ ಪೋಷಕರಿಗೆ ದಿವ್ಯಾ ವಿಷಯ ತಿಳಿಸಿದ್ದಳು. ಪೋಷಕರು ಆದಿತ್ಯನನ್ನು ಕರೆಸಿ ಬುದ್ದಿ ಮಾತು ಹೇಳಿ ಕಳುಹಿಸಿಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಆದಿತ್ಯ ಮತ್ತೆ ಮತ್ತೆ ದಿವ್ಯಾಗೆ ಕಿರುಕುಳ ನೀಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ ಪೋಷಕರು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular