HomeKarnatakaವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯರಾದ ಬಾಲಕಿಯರು: ಇಬ್ಬರು ಬಾಲಕರು ವಶಕ್ಕೆ

ವಯಸ್ಸಲ್ಲದ ವಯಸ್ಸಲ್ಲಿ ಗರ್ಭಿಣಿಯರಾದ ಬಾಲಕಿಯರು: ಇಬ್ಬರು ಬಾಲಕರು ವಶಕ್ಕೆ

ಮೈಸೂರು: ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರು ಗರ್ಭಿಣಿಯರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ಸರಗೂರು ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಅಪ್ರಾಪ್ತ ಬಾಲಕಿಯರನ್ನು ಮದುವೆಯಾಗಿ ಗರ್ಭಿಣಿಯರನ್ನಾಗಿಸಿದ ಆರೋಪದ ಮೇಲೆಗೆ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಾಲಕರು ಮತ್ತು ಬಾಲಕಿಯರು ಮದುವೆಯಾಗಿ ಜೀವನ ನಡೆಸುತ್ತಿದ್ದು, ಬಾಲಕಿಯರು ಗರ್ಭಿಣಿಯರಾಗಿರುವುದು ವೈದ್ಯರ ತಪಾಸಣೆಯಲ್ಲಿ ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸಿಪಿಐ ಎಂ. ಲಕ್ಷ್ಮಿಕಾಂತ್, ಪಿಎಸ್ಐ ನಂದೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಾಲಕರಿಬ್ಬರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular