HomeKarnatakaರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ರೈಲು ನಿಲ್ದಾಣದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಚಿಕ್ಕಬಳ್ಳಾಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು, ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ. ಕಲ್ಬುರ್ಗಿ ಜಿಲ್ಲೆಯ ಚಂದ್ರಮ್ಮ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಬೆಂಗಳೂರಿನಲ್ಲಿ ವಾಸವಾಗಿರುವ ಅವರು, ಎಂಟು ತಿಂಗಳ ಗರ್ಭಿಣಿಯಾಗಿದ್ದು, ಚಿತ್ತಾಪುರದ ಸಂಬಂಧಿಕರ ಮನೆಗೆ ಸಹೋದರ ಹಾಗೂ ಸಂಬಂಧಿ ಜೊತೆಗೆ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಕಲಬುರ್ಗಿಗೆ ಪ್ರಯಾಣ ಬೆಳೆಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲು ಬೆಂಗಳೂರಿನಿಂದ ಯಲಹಂಕ ತಲುಪುವಷ್ಟರಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿ ಸಹಾಯಕ್ಕೆ ಮನವಿ ಮಾಡಲಾಗಿದೆ. ರೈಲ್ವೇ ಇಲಾಖೆ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಲು ಸಿದ್ಧತೆ ಮಾಡಿಕೊಂಡಿದ್ದು, ಗೌರಿಬಿದನೂರು ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಹೆರಿಗೆಯಾಗಿದೆ. ಇಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದು, ಗೌರಿಬಿದನೂರು ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular