HomeEntertainmentಪ್ರೇಮಾನಂದ್ ಮಹಾರಾಜ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ: ಕಿಡಿಕಾರಿದ ಬಾಲಿವುಡ್ ನಟಿ ಇಶಾ ಗುಪ್ತಾ

ಪ್ರೇಮಾನಂದ್ ಮಹಾರಾಜ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ: ಕಿಡಿಕಾರಿದ ಬಾಲಿವುಡ್ ನಟಿ ಇಶಾ ಗುಪ್ತಾ

ಪ್ರಸಿದ್ಧ ಆಧ್ಯಾತ್ಮಿಕ ಗುರುಗಳಾದ ಶ್ರೀ ಪ್ರೇಮಾನಂದ್ ಮಹಾರಾಜ್ ಅವರ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಬಾಲಿವುಡ್ ನಟಿ ಇಶಾ ಗುಪ್ತಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪು ಮಾಹಿತಿಗಳನ್ನು ಹರಡುವ ಸಾಮಾಜಿಕ ಮಾಧ್ಯಮಗಳ ವಿರುದ್ಧ ಕಿಡಿಕಾರಿದ್ದಾರೆ.

ಕೆಲ ದಿನಗಳಿಂದ ಇಂಟರ್ನೆಟ್ ನಲ್ಲಿ ಪ್ರೇಮಾನಂದ್ ಮಹಾರಾಜ್ ಅವರ ಆರೋಗ್ಯ ಹದಗೆಟ್ಟಿದೆ ಎಂಬ ತಪ್ಪು ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಕಳವಳಗೊಂಡಿರುವ ಇಶಾ ಗುಪ್ತಾ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಬರಹವೊಂದನ್ನು ಹಂಚಿಕೊಂಡಿದ್ದಾರೆ. ಕೇವಲ ಲೈಕ್ಸ್ ಮತ್ತು ವೀಕ್ಷಣೆಗಳಿಗಾಗಿ ಸುಳ್ಳು ಸುದ್ದಿಗಳನ್ನು ಸೃಷ್ಟಿಸುವ ಪುಟಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಶ್ರೀಗಳ ಬಗ್ಗೆ ಯಾವುದೇ ಆಧಾರರಹಿತ ವಿಷಯಗಳನ್ನು ಬರೆಯಬೇಡಿ ಎಂದು ಮನವಿ ಮಾಡಿದ್ದಾರೆ. ಪ್ರಸ್ತುತ ಮಹಾರಾಜ್ ಅವರು ಯಮುನಾ ತೀರದಲ್ಲಿ ಏಕಾಂತದಲ್ಲಿದ್ದಾರೆ. ಅವರ ಮೇಲೆ ನಿಮಗೆ ನಿಜವಾದ ಭಕ್ತಿ ಇದ್ದರೆ, ನೆಗೆಟಿವಿಟಿ ಹರಡುವುದನ್ನು ನಿಲ್ಲಿಸಿ ಅವರಿಗಾಗಿ ಪ್ರಾರ್ಥನೆ ಮಾಡಿ ಎಂದು ಇಶಾ ಗುಪ್ತಾ ಭಕ್ತರಲ್ಲಿ ವಿನಂತಿಸಿಕೊಂಡಿದ್ದಾರೆ.

ವದಂತಿಗಳಿಗೆ ಕಾರಣವಾದ ವಿಡಿಯೋ ಸಂದೇಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೀರ್ಘಕಾಲದಿಂದ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಪ್ರೇಮಾನಂದ್ ಮಹಾರಾಜ್ ಅವರಿಗೆ ದೇಶಾದ್ಯಂತ ಲಕ್ಷಾಂತರ ಭಕ್ತರಿದ್ದಾರೆ. ಇತ್ತೀಚೆಗೆ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಅದರಲ್ಲಿ ಅವರು, ನಾವು ಮುಂದೆ ಸಿಗುತ್ತೇವೆಯೋ ಇಲ್ಲವೋ, ಮಾತನಾಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ, ಆದರೆ ನಾನು ನಿಮ್ಮೆಲ್ಲರನ್ನೂ ತುಂಬಾ ಪ್ರೀತಿಸುತ್ತೇನೆ. ಯಾರೂ ನನ್ನ ಬಗ್ಗೆ ಚಿಂತಿಸಬೇಡಿ ಎಂದು ಭಾವುಕರಾಗಿ ನುಡಿದಿದ್ದರು. ಈ ವಿಡಿಯೋ ಪ್ರಕಟವಾದ ಬೆನ್ನಲ್ಲೇ ಅವರ ಆರೋಗ್ಯದ ಬಗ್ಗೆ ಜಾಲತಾಣಗಳಲ್ಲಿ ನಾನಾ ರೀತಿಯ ಚರ್ಚೆಗಳು ಆರಂಭವಾಗಿದ್ದವು. ಈ ಹಿನ್ನೆಲೆಯಲ್ಲಿ ನಟಿ ಇಶಾ ಗುಪ್ತಾ ವದಂತಿಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

ಇಶಾ ಗುಪ್ತಾ ಅವರ ಈ ಜವಾಬ್ದಾರಿಯುತ ನಡೆಗೆ ಶ್ರೀಗಳ ಅಪಾರ ಭಕ್ತ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಇನ್ನು ಚಿತ್ರರಂಗದ ವಿಚಾರಕ್ಕೆ ಬಂದರೆ ಇಶಾ ಗುಪ್ತಾ ಸದ್ಯದಲ್ಲೇ ಬಹುನಿರೀಕ್ಷಿತ ಧಮಾಲ್ 4 ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ರಿತೇಶ್ ದೇಶ್ ಮುಖ್, ಅರ್ಷದ್ ವಾರ್ಸಿ ಸೇರಿದಂತೆ ದೊಡ್ಡ ತಾರಾಗಣವೇ ಈ ಸಿನಿಮಾದಲ್ಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular