HomeEntertainmentನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ ಜೋಗಿ ಪ್ರೇಮ್

ನಿರ್ಮಾಪಕ ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ ಜೋಗಿ ಪ್ರೇಮ್

ಬೆಂಗಳೂರು: ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಾಪಕ ಕನಕಪುರ ಶ್ರೀನಿವಾಸ್, ಚಿತ್ರರಂಗದಲ್ಲಿರುವ ಹಲವರು ನನಗೆ ಮೋಸ ಮಾಡಿದ್ದಾರೆ. ಪ್ರೇಮ್, ಅರ್ಜುನ್ ಜನ್ಯಾ ಸೇರಿದಂತೆ ಹಲವರು ನನಗೆ ಮೋಸ ಮಾಡಿದ್ದಾಗಿ ಆರೋಪ ಮಾಡಿದ್ದರು. ಇದೇ ವಿಚಾರವಾಗಿ ನಿರ್ದೇಶಕ ಜೋಗಿ ಪ್ರೇಮ್, ಕನಕಪುರ ಶ್ರೀನಿವಾಸ್ ವಿರುದ್ಧ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.

ಫಿಲಂ ಚೇಂಬರ್ ಗೆ ಆಗಮಿಸಿದ ಪ್ರೇಮ್, ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರನ್ನು ಭೇಟಿಯಾಗಿ ಕನಕಪುರ ಶ್ರೀನಿವಾಸ್ ವಿರುದ್ಧ ದೂರು ನೀಡಿದರು.

ಪ್ರೇಮ್ ನೀಡಿರುವ ದೂರಿನಲ್ಲಿ ಏನಿದೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು 25 ವರ್ಷಗಳಿಂದ ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸುತ್ತಿದ್ದು ಇಲ್ಲಿಯವರೆಗೂ ಹಲವಾರು ನಿರ್ಮಾಪಕರ ಜೊತೆ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಹಲವಾರು ಸದಾಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿದ್ದೇನೆ, ಇಲ್ಲಿಯವರೆಗೂ ನನ್ನ ವೃತ್ತಿ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯನಿರ್ವಹಿಸುತ್ತ ಬಂದಿರುತ್ತೇನೆ. ನಿರ್ಮಾಪಕ ಆರ್. ಎಸ್ ಶ್ರೀನಿವಾಸ್ ರವರು ನನ್ನ ಬಳಿ ಬಂದು ನಿರ್ದೇಶನ ಮಾಡಿ ಕೊಡಲು ಕೇಳಿಕೊಂಡು ನನ್ನ ಬಳಿ ಬಂದು 2004 ರಲ್ಲಿ ಕೆ. ಪಿ. ಶ್ರೀಕಾಂತ್ ಎನ್ನುವವರ ಮೂಲಕ ಆರ್. ಎಸ್ ಶ್ರೀನಿವಾಸ್ ರವರು ಬಂದು ಮುಂಗಡವಾಗಿ 9 ಲಕ್ಷಗಳನ್ನು ನೀಡಿದ್ದರು ಅದರಲ್ಲಿ ಚೆಕ್ ಮೂಲಕ 5 ಲಕ್ಷ ಹಾಗೂ ನಗದು ರೂಪದಲ್ಲಿ 4 ಲಕ್ಷಗಳನ್ನು ನೀಡಿದ್ದರು. ಇದಾದನಂತರ ಅವರಿಗಾಗಿ ಸಿನಿಮಾ ಮಾಡಲು ಒಂದು ಆಫೀಸ್ ಮಾಡಿ ಒಂದು ತಂಡವನ್ನು ಕಟ್ಟಿಕೊಂಡು ಚಿತ್ರಕಥೆ ಬರೆಯಲು ಪ್ರಾರಂಭಿಸಿದೆ, ಕಥೆ ಹಾಗೂ ಚಿತ್ರ ಕಥೆ ತಯಾರಾದ ನಂತರ ಹಲವು ಬಾರಿ ಸಂಪರ್ಕಿಸಿದಾಗ ಅವರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಸಿಗದೇ ಇದ್ದಾಗ ಒಂದು ವರ್ಷಗಳ ಕಾಲ ನನ್ನ ಹಾಗೂ ನನ್ನ ತಂಡದ ಸಮಯವನ್ನು ವ್ಯರ್ಥ ಮಾಡಿದ್ದಲ್ಲದೆ ಯಾವುದೇ ರೀತಿಯ ಹಣ ಕಾಸನ್ನು ನನ್ನ ಆಫೀಸ್ ನ ವೆಚ್ಚಕ್ಕಾಗಲಿ, ನನ್ನ ಸಹ ನಿರ್ದೇಶಕರಿಗೆ ಹಾಗೂ ತಂಡಕ್ಕಾಗಲಿ ನೀಡಲಿಲ್ಲ. ಒಂದು ವರ್ಷಗಳ ಕಾಲ ಆಫೀಸ್ ನ ಹಾಗೂ ತಂಡದ ಖರ್ಚು-ವೆಚ್ಚಗಳನ್ನು ನಾನೇ ಬರಿಸಿರುತ್ತೇನೆ, ಇದರಿಂದ ನನಗೆ ವೈಯಕ್ತಿಕವಾಗಿ 15 ರಿಂದ 20 ಲಕ್ಷ ಖರ್ಚು ಮಾಡಿದ್ದೇನೆ ಹಾಗೂ ನನಗೆ ಈ ಸಮಯದಲ್ಲಿ ಹಲವಾರು ನಿರ್ಮಾಪಕರು ನನಗೆ ನಿರ್ದೇಶಿಸಲು ಹಾಗೂ ನನಗೆ ಅವಕಾಶಗಳು ಬಂದಿದ್ದವು ನಾನು ಇವರ ಚಿತ್ರ ನಿರ್ದೇಶನ ಮಾಡಲು ಬಂದಂತಹ ಈ ಎಲ್ಲಾ ಅವಕಾಶಗಳನ್ನು ಕಳೆದುಕೊಂಡಿದ್ದಲ್ಲದೆ ಕೋಟಿಗಟ್ಟಲೆ ನಷ್ಟವನ್ನು ಅನುಭವಿಸಿದ್ದೇನೆ ಎಂದಿದ್ದಾರೆ.

ಇತ್ತೀಚೆಗೆ ನಡೆದ ಸಿನಿಮಾ ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕನಕಪುರ ಶ್ರೀನಿವಾಸ್, ಪ್ರೇಮ್ ಹಣ ಪಡೆದು ಸಿನಿಮಾ ಮಾಡಿಕೊಡದೇ ವಂಚಿಸಿದ್ದಾರೆ ಎಂದು ಆರೋಪ ಮಾಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular