HomeKarnatakaಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆ: ಜೂ. 1ರಂದು ತಳಿರು ತೋರಣ ಕಟ್ಟಿ ಮಕ್ಕಳಿಗೆ ಸಂಭ್ರಮದ ಸ್ವಾಗತ:...

ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆ: ಜೂ. 1ರಂದು ತಳಿರು ತೋರಣ ಕಟ್ಟಿ ಮಕ್ಕಳಿಗೆ ಸಂಭ್ರಮದ ಸ್ವಾಗತ: 1 ಸಾವಿರ ಕೆಪಿಎಸ್ ಶಾಲೆಗಳಿಗೆ ಸಿಎಂ ಚಾಲನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಹೊಸ ಶೈಕ್ಷಣಿಕ ವರ್ಷದ ಸಿದ್ಧತೆ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ​ಇಂದು ‘ಸಮಗ್ರ ಶಿಕ್ಷಣ ಕರ್ನಾಟಕ’ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು ಹಾಗೂ ಎಸ್‌ಡಿಎಂಸಿ (SDMC) ಸದಸ್ಯರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿ, ಮುಂಬರುವ ಶೈಕ್ಷಣಿಕ ವರ್ಷದ ಸಿದ್ಧತೆಗಳು ಹಾಗೂ ಹೊಸ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ.

ಜೂನ್ 1 ಶಿಕ್ಷಣದಲ್ಲಿ ಹೊಸ ಶಕೆ: ರಾಜ್ಯಾದ್ಯಂತ ಒಟ್ಟು 1000 ‘ಕರ್ನಾಟಕ ಪಬ್ಲಿಕ್ ಶಾಲೆಗಳನ್ನು’ (KPS) ಆರಂಭಿಸುವ ಗುರಿ ಹೊಂದಿದ್ದು, ಜೂನ್ 1 ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ KPS ಶಾಲೆಗಳ ಶಂಕುಸ್ಥಾಪನೆ ನೆರವೇರಲಿದೆ.

ಮಕ್ಕಳ ಹಬ್ಬ – ಅದ್ದೂರಿ ಸ್ವಾಗತ: ಮೇ 29 ರಿಂದ 31ರವರೆಗೆ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ, ಜೂನ್ 1 ರಂದು ತಳಿರು ತೋರಣ ಕಟ್ಟಿ, ಸಮುದಾಯದ ಸಹಭಾಗಿತ್ವದಲ್ಲಿ ಊಟದ ವ್ಯವಸ್ಥೆಯೊಂದಿಗೆ ಮಕ್ಕಳನ್ನು ಸಂಭ್ರಮದಿಂದ ಶಾಲೆಗೆ ಬರಮಾಡಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ನಮ್ಮ ಶಾಲೆ ನಮ್ಮ ಜವಾಬ್ದಾರಿ: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಉದ್ಯಮಿಗಳು ಕೈಜೋಡಿಸಿ, ಸ್ಮಾರ್ಟ್ ಟಿವಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ವೃದ್ಧಿಗೆ ಸಹಕರಿಸಲು ಕೋರಲಾಗಿದೆ.

​ದಾಖಲಾತಿ ಅಭಿಯಾನ: ನುರಿತ ಶಿಕ್ಷಕರಿರುವ ನಮ್ಮ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಪೋಷಕರಲ್ಲಿ ಜಾಗೃತಿ ಮೂಡಿಸಲಾಗುವುದು.

ಪೌಷ್ಟಿಕಾಂಶ ಹಾಗೂ ಸೌಲಭ್ಯ: ಅಜೀಂ ಪ್ರೇಮ್‌ಜಿ ಫೌಂಡೇಶನ್ ನೆರವಿನೊಂದಿಗೆ ಪ್ರತಿದಿನ ಮೊಟ್ಟೆ/ಬಾಳೆಹಣ್ಣು ವಿತರಣೆ ಹಾಗೂ ವಿಶೇಷ ತರಗತಿಗಳಿಗಾಗಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ.

​ಶಿಕ್ಷಣ ಎಂಬುದು ಯಾರಿಂದಲೂ ಕದಿಯಲಾಗದ ಏಕೈಕ ಸಂಪತ್ತು.” ಬನ್ನಿ, ನಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವ ಈ ಮಹತ್ಕಾರ್ಯದಲ್ಲಿ ಶಿಕ್ಷಕರು, ಪೋಷಕರು ಹಾಗೂ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular