HomeKarnatakaಶರಣಾದ ನಕ್ಸಲರ ಪ್ರಕರಣಗಳ ತನಿಖೆಗೆ ಸಿದ್ಧತೆ: 15 ದಿನ ವಶಕ್ಕೆ ನೀಡಲು ಪೊಲೀಸರ ಮನವಿ

ಶರಣಾದ ನಕ್ಸಲರ ಪ್ರಕರಣಗಳ ತನಿಖೆಗೆ ಸಿದ್ಧತೆ: 15 ದಿನ ವಶಕ್ಕೆ ನೀಡಲು ಪೊಲೀಸರ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ 6 ನಕ್ಸಲರು ಶರಣಾಗತರಾದ ವಿಚಾರಕ್ಕೆ ಸಂಬಂಧಿಸಿದಂತೆ ಶರಣಾಗಿರುವ ನಕ್ಸಲರ ವಿರುದ್ಧದ ಪ್ರಕರಣಗಳ ಸಂಬಂಧ ತನಿಖೆಗೆ ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ.

ಕಾಡಿನಲ್ಲಿ ಪತ್ತೆಯಾಗಿರುವ ಶಸ್ತ್ರಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಇಂದು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ನಕ್ಸಲರನ್ನು ಕಸ್ಟಡಿಗೆ ಪಡೆಯುವ ಕುರಿತಂತೆ ಮನವಿ ಸಲ್ಲಿಸಲಾಗುವುದು.

15 ದಿನಗಳ ಕಾಲ ತಮ್ಮ ವಶಕ್ಕೆ ಶರಣಾಗತರಾದ ನಕ್ಸಲರನ್ನು ನೀಡುವಂತೆ ಪೊಲೀಸರು ಮನವಿ ಸಲ್ಲಿಸಲಿದ್ದಾರೆ. ಕೋರ್ಟ್ ವರ್ಷಕ್ಕೆ ನೀಡಿದರೆ ಚಿಕ್ಕಮಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡ ಶರಣಾದ ನಕ್ಸಲರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular