BREAKING : ದೇಶದ ಜನತೆಗೆ 75 ನೇ ಗಣರಾಜ್ಯೋತ್ಸವದ ಶುಭ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು | President Draupadi Murmu

ನವದೆಹಲಿ : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

75 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು, 75 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು, ನಾನು ನಿಮ್ಮೆಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಯುಗವನ್ನು ರೂಪಿಸುವ ಬದಲಾವಣೆಯ ಅವಧಿ. ಗಣರಾಜ್ಯೋತ್ಸವವು ನಮ್ಮ ಮೂಲಭೂತ ಮೌಲ್ಯಗಳು ಮತ್ತು ತತ್ವಗಳನ್ನು ನೆನಪಿಸಿಕೊಳ್ಳುವ ಪ್ರಮುಖ ಸಂದರ್ಭವಾಗಿದೆ ಎಂದಿದ್ದಾರೆ.

ಭಾರತ ಪ್ರಜಾಪ್ರಭುತ್ವದ ತಾಯಿ, ದೇಶದ ಅಭಿವೃದ್ಧಿಗೆ ಪ್ರತಿ ನಾಗರಿಕನ ಕೊಡುಗೆ ಬಹಳ ಮಹತ್ವದ್ದಾಗಿದೆ. ನಮ್ಮ ದೇಶವನ್ನು ಎತ್ತರ ಮಟ್ಟಕ್ಕೆ ಕೊಂಡೊಯ್ಯುವ ಅವಕಾಶ ಇದೆ.  ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ ಯಶಸ್ವಿಯಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read